ಚಿಕ್ಕೋಡಿ: ಅಖಂಡ ಬೆಳಗಾವಿಯನ್ನು ವಿಭಜಿಸಿ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇರುವುದಾಗಿ ಚಿಕ್ಕೋಡಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ ಹಾಗೂ ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ನೀಡಿದ ಹೇಳಿಕೆ ಸ್ವಾಗತಾರ್ಹ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್.ವೈ.ಹಂಜಿ ಹೇಳಿದರು.

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ರುದ್ರಪ್ಪ ಸಂಗಪ್ಪಗೋಳ ಮಾತನಾಡಿ, ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಅಥಣಿ ತಾಲ್ಲೂಕು ಹೊರತುಪಡಿಸಿ ಇನ್ನುಳಿದ ಯಾವುದೇ ತಾಲ್ಲೂಕಿನ ಜನರು ಪ್ರತ್ಯೇಕ ಜಿಲ್ಲೆಯ ಬೇಡಿಕೆ ಇಟ್ಟಿಲ್ಲ. ಅಥಣಿ ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ಹಾಸ್ಯಾಸ್ಪದ. ಇಂತಹ ಹೇಳಿಕೆ ನೀಡುವ ಮೂಲಕ ಸ್ಥಳೀಯ ಜನರ ದಿಕ್ಕುತಪ್ಪಿಸುವ ಕೆಲಸ ಮಾಡಬಾರದು. ಚಿಕ್ಕೋಡಿ ಜಿಲ್ಲೆ ರಚನೆಗೆ ಸಹಮತವ್ಯಕ್ತಪಡಿಸಿ ಸಹಕರಿಸಬೇಕೆಂದು ಹೇಳಿದರು.

ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಸುರೇಶ ಬ್ಯಾಕೂಡೆ, ನಾಗೇಶ ಮಾಳಿ, ಅಸ್ಫಾಕ್ ಸೈಯದ್, ಕುಮಾರ ಗುಡೆ, ರಮೇಶ ಕರನೂರೆ, ರವಿ ಮಾಳಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.