ಬೆಳಗಾವಿ: ಇಲ್ಲಿನ ಟಿಳಕವಾಡಿಯ ಮನೆಯಲ್ಲಿ ಪತಿಯಿಂದಲೇ ಬಂಧನಕ್ಕೆ ಒಳಗಾಗಿ ಚಿತ್ರಹಿಂಸೆ ಅನುಭವಿಸುತ್ತಿದ್ದ ಮಹಿಳೆ ಹಾಗೂ ಅವರ ಇಬ್ಬರು ಮಕ್ಕಳನ್ನು ಅಕ್ಕ ಪಡೆಯವರು ರಕ್ಷಿಸಿ, ವೈದ್ಯಕೀಯ ಚಿಕಿತ್ಸೆ ಕೊಡಿಸಿದ್ದಾರೆ.

ಟಿಳಕವಾಡಿಯ ಮನೆಯ ಮಲಗುವ ಕೊಠಡಿಯಲ್ಲಿ ಪತ್ನಿಯನ್ನು ಬಂಧನದಲ್ಲಿ ಇರಿಸಿ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಕುರಿತು ದೆಹಲಿಯಿಂದ ಸ್ಥಳೀಯ ಪೊಲೀಸರಿಗೆ ಕರೆ ಬಂದಿತ್ತು.

ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಅವರು, ಬೆಳಗಾವಿ ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ಡಿ.ಪಿ.ನಿಂಬಾಳಕರ ಅವರಿಗೆ ನಿರ್ದೇಶನ ನೀಡಿದ್ದರು. ಈ ಮನೆ ಪತ್ತೆಹಚ್ಚಿ, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ಅಕ್ಕ ಪಡೆಗೆ ನಿಂಬಾಳಕರ ತಿಳಿಸಿದ್ದರು.

ನಂತರ ಅಕ್ಕ ಪಡೆಯ ತಂಡದವರು ಮನೆಗೆ ತೆರಳಿ, ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸಿದ್ದಾರೆ. ಮಹಿಳಾ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ದೂರು ಆಧರಿಸಿ ಪತಿ ವಶಕ್ಕೆ ಪಡೆಯಲಾಗಿದೆ. ವಿಮಾನದ ಮೂಲಕ ಮಹಿಳೆಯನ್ನು ತವರಾದ ದೆಹಲಿಗೆ ರವಾನಿಸಲಾಗಿದೆ.

‘ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ, ಚುಡಾಯಿಸುವುದು, ಹಿಂಬಾಲಿಸುವುದು, ಕೌಟುಂಬಿಕ ಕಲಹ ಸೇರಿದಂತೆ 55 ಪ್ರಕರಣಗಳು ಅಕ್ಕ ಪಡೆಯಲ್ಲಿ ದಾಖಲಾಗಿವೆ’ ಎಂದು ಭೂಷಣ ಬೊರಸೆ ತಿಳಿಸಿದ್ದಾರೆ.

ಬೆಳಗಾವಿ: ಇಲ್ಲಿನ ಉದ್ಯಮಬಾಗ್ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಗಾಂಜಾ ಸೇವಿಸುತ್ತಿದ್ದ ಭಾರತ ನಗರದ ಮಂಜುನಾಥ ದೊಂಗಡಿ ಎಂಬಾತನನ್ನು ಉದ್ಯಮಬಾಗ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಮಹಾದ್ವಾರ ರಸ್ತೆಯಲ್ಲಿ ಶನಿವಾರ ಗಾಂಜಾ ಸೇವಿಸುತ್ತಿದ್ದ ಅದೇ ಪ್ರದೇಶದ ಸೂರಜ್ ಗುಂಡೇಕರ ಎಂಬಾತನನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-21-1131659452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.