ಬೆಳಗಾವಿ: ಮಳೆಗಾಲದಲ್ಲಿ ನಾಲೆಗಳು, ಚರಂಡಿಗಳು ತುಂಬಿ ರಸ್ತೆ ಮೇಲೆ ನೀರು ಹರಿಯುವುದು ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಇಲ್ಲಿನ ಮಹಾನಗರ ಪಾಲಿಕೆಯಿಂದ ನಾಲೆ ಹೂಳೆತ್ತುವ ಹಾಗೂ ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ.

ಹಲವು ಬಡಾವಣೆಗಳ ಸಾರ್ವಜನಿಕರಿಂದ ದೂರುಗಳು ಸಹ ಬಂದಿವೆ. ವಿವಿಧ ನಗರ ಸೇವಕರೂ ಮಳೆಗಾಲದಿಂದಾಗುವ ಅನಾನುಕೂಲಗಳನ್ನು ಮುಂಚಿತವಾಗಿ ಸರಿಪಡಿಸಬೇಕೆಂಬ ಸಲಹೆಯನ್ನು ಸಹ ನೀಡಿದ್ದರು. ಈ ನಿಟ್ಟಿನಲ್ಲಿ ಪಾಲಿಕೆಯು ಹೆಜ್ಜೆ ಇಟ್ಟಿದೆ.

ಜತೆಗೆ ಗಾಳಿ– ಮಳೆಯಿಂದ ಬೀಳುವ ಹಂತದಲ್ಲಿರುವ ಮರ, ವಿದ್ಯುತ್ ತಂತಿಗಳ ತೆರವು, ಚರಂಡಿಗಳ ಮೇಲೆ ಬಿದ್ದು ಅಪಾಯ ತಂದೊಡ್ಡಲಿರುವ ಗಿಡ– ಮರಗಳನ್ನು ತೆಗೆದುಹಾಕುವ ಕಾರ್ಯವೂ ಭರದಿಂದ ಸಾಗಿದೆ.

ಪಾಲಿಕೆ ಆಯುಕ್ತ ಎಂ.ಕಾರ್ತಿಕ್ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಸಹ ಸ್ವೀಕರಿಸಿದ್ದಾರೆ. ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-1507022637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.