ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಮೂರೂ ಕಾಲುವೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.

ಮಂಗಳವಾರ ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಕರೆದಿದ್ದ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆಯ ಬೇಗೆ ನೀಗಿಸಲು ಕಾಲುವೆಗಳಿಗೆ ನೀರು ಹರಿಸುವುದು ಅವಶ್ಯಕವಾಗಿದೆ ಎಂದರು.

ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪ್ರಸಕ್ತ ಸನ್ನಿವೇಶದಲ್ಲಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸಾರ್ವಜನಿಕರು ಹಾಗು ಜಾನುವಾರುಗಳ ಹಿತದೃಷ್ಟಿಯಿಂದ ನೀರು ಹರಿಸುವ ವಿಶ್ವಾಸ ನನಗಿದೆ. ಇನ್ನೆರಡು ದಿನಗಳಲ್ಲಿ ರೈತರಿಗೆ ಶುಭ ಸುದ್ದಿ ಸಿಗಲಿದೆ ಎಂದು ತಿಳಿಸಿದರು.

ಕಾಲುವೆಗಳಳ ಮೂಲಕ ನೀರು ಹರಿಸಲು ಅಧಿಕಾರಿಗಳು ಮುಂದೆ ಬರಬೇಕು. ನದಿ ತೀರದ ಗ್ರಾಮಗಳಿಗೂ ಸಹ ನೀರು ಹರಿಯಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳ ಮಧ್ಯ ಸಮನ್ವಯ ಸಾಧಿಸಿ. ರೈತರಿಗೆ ನೀರು ಸಿಗಬೇಕೆನ್ನುವ ಮಹತ್ವಾಕಾಂಕ್ಷೆ ನಮ್ಮದು ಎಂದರು. ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-21-1774013930

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.