ಬೆಳಗಾವಿ: ಇಲ್ಲಿನ ಬಿ.ಶಂಕರಾನಂದ ಮಾರ್ಗದಲ್ಲಿ (ಕ್ಲಬ್ ರಸ್ತೆ) ಮಂಗಳವಾರ ಮಧ್ಯಾಹ್ನ ಬೈಕ್ನಲ್ಲಿ ಬಂದ ಇಬ್ಬರು, ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪುತ್ರ ಮೃಣಾಲ್ ಅವರ ಕಾರು ಚಾಲಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.

ತಾಲ್ಲೂಕಿನ ಬೆಳಗುಂದಿಯ ಬಸವಂತ ಕಡೋಲ್ಕರ (32) ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

‘ಕಾರು ನಿಲ್ಲಿಸಿ ರಸ್ತೆಯಲ್ಲಿ ನಿಂತಿದ್ದ ಬಸವಂತ ಅವರ ಜತೆಗೆ, ಬೈಕ್ನಲ್ಲಿ ಬಂದ ಇಬ್ಬರು ಮಾತನಾಡಿದ್ದಾರೆ. ನಂತರ ಎದೆ, ಭುಜ ಮತ್ತಿತರ ಕಡೆ ಚಾಕುವಿನಿಂದ ಇರಿದಿದ್ದಾರೆ. ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದೇವೆ’ ಎಂದು ಕ್ಯಾಂಪ್ ಠಾಣೆ ಇನ್ಸ್ಪೆಕ್ಟರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.