ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: 1ರಿಂದ 5ರವರೆಗಿನ ತರಗತಿಗಳು ಪುನರಾರಂಭ

Last Updated 25 ಅಕ್ಟೋಬರ್ 2021, 8:38 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 678 ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 956 ಸೇರಿ 1,634 ಶಾಲೆಗಳಲ್ಲಿ 1–5ರಿಂದ ತರಗತಿಗಳು ಸೋಮವಾರ ‍ಪುನರಾರಂಭಗೊಂಡವು.

ಶೇ 50ರಷ್ಟು ವಿದ್ಯಾರ್ಥಿಗಳು ಆಫ್‌ಲೈನ್‌ ಹಾಜರಾಗಲು ಸರ್ಕಾರ ಅವಕಾಶ ನೀಡಿದೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಶಿಕ್ಷಕರು ಮತ್ತು ಸಿಬ್ಬಂದಿ ಚಿಣ್ಣರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಕೋವಿಡ್ ಮಾರ್ಗಸೂಚಿ ಪಾಲಿಸಿ ತರಗತಿಗಳನ್ನು ನಡೆಸಲು ಕ್ರಮ ವಹಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ ತಾಲ್ಲೂಕಿನ ಹಿಂಡಲಗಾ ಸರ್ಕಾರಿ ಕನ್ನಡ ಹಾಗೂ ಮರಾಠಿ ಶಾಲೆಯಲ್ಲಿ ಮಕ್ಕಳಿಗೆ ಪುಷ್ಪವೃಷ್ಟಿ ಮಾಡಿ, ಚಾಕೊಲೆಟ್, ಮಾಸ್ಕ್ ಹಾಗೂ ಸ್ಯಾನಿಟೈಸರ್‌ ನೀಡಿ ಬರಮಾಡಿಕೊಳ್ಳಲಾಯಿತು. ಗೇಟಿನಲ್ಲಿ ಬಲೂನುಗಳನ್ನು ಕಟ್ಟಿ ಸಿಂಗರಿಸಲಾಗಿತ್ತು. ಸಂಭ್ರಮದಿಂದ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು. ಇದೇ ರೀತಿ ಹಲವು ಶಾಲೆಗಳಲ್ಲಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT