ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತದಾನ ಏ. 17ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ವೃದ್ಧಿಸಲು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯವರು ಮತ್ತು ಪೊಲೀಸರು ಇಲ್ಲಿ ಶನಿವಾರ ಪಥಸಂಚಲನ ನಡೆಸಿದರು.

ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ರಾಣಿ ಚನ್ನಮ್ಮ ವೃತ್ತದಿಂದ ಆರಂಭವಾದ ಪಥಸಂಚಲನಕ್ಕೆ ಜಿಲ್ಲಾ ಚುನಾವಣಾಧಿಕಾರಿ ಡಾ.ಹರೀಶಕುಮಾರ್ ಹಸಿರು ನಿಶಾನೆ ತೋರಿಸಿದರು.

ಬಳಿಕ ಮಾತನಾಡಿದ ಅವರು, ‘ಉಪ ಚುನಾವಣೆಯನ್ನು ಸುಗಮ ಮತ್ತು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮತದಾರರು ಯಾವುದೇ ಆತಂಕವಿಲ್ಲದೆ ನಿರ್ಭಿತಿಯಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಭದ್ರತೆ ಸೇರಿದಂತೆ ಎಲ್ಲ ಪೂರಕ ಕ್ರಮಗಳ ಬಗ್ಗೆ ಜನರಲ್ಲಿ ವಿಶ್ವಾಸ ವೃದ್ಧಿಸಲು ಪಥಸಂಚಲನ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

‘ಮುಂಬರುವ ದಿನಗಳಲ್ಲಿ ಆಯ್ದ ವಲ್ನರೇಬಲ್ (ದುರ್ಬಲ) ಹಾಗೂ ಸೂಕ್ಷ್ಮ ಮತಗಟ್ಟೆಗಳ ವ್ಯಾಪ್ತಿಯಲ್ಲೂ ಭದ್ರತಾ ಪಡೆಗಳ ಪಥಸಂಚಲನ ನಡೆಸಲಾಗುವುದು’ ಎಂದರು.

ಸಿ.ಆರ್.ಪಿ.ಎಫ್, ರಾಜ್ಯ ಮೀಸಲು ಪೊಲೀಸ್ ಪಡೆಗಳು, ನಗರ ಪೊಲೀಸ್, ಗೃಹರಕ್ಷಕ ದಳದವರು ಪಾಲ್ಗೊಂಡಿದ್ದರು. ಖಡಕ್ ಗಲ್ಲಿ, ಖಂಜರ್ಗಲ್ಲಿ, ಖಡೇಬಜಾರ್ ಮೊದಲಾದ ಕಡೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಡಿಸಿಪಿಗಳಾದ ಯಶೋದಾ ವಂಟಗೋಡಿ, ಮುತ್ತುರಾಜ್, ಎಸಿಪಿಗಳಾದ ನಾರಾಯಣ ಭರಮನಿ, ಚಂದ್ರಪ್ಪ ಮತ್ತು ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.