ಬೆಳಗಾವಿ: ಭೂ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಿ ಹಲವು ದಿನಗಳಿಂದ ಅಲೆದಾಡಿದರೂ ಕೆಲಸ ಮಾಡಿಕೊಡುತ್ತಿಲ್ಲ ಎಂದು ಮನನೊಂದ ರೈತ ರುದ್ರಯ್ಯ ಅಮ್ಮಿನಭಾವಿಮಠ (49) ಅವರು ಇಲ್ಲಿನ ಕಂದಾಯ ಇಲಾಖೆಯ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲೇ ಗುರುವಾರ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಇವರು ತಮ್ಮ ಎರಡು ಎಕರೆ ಜಮೀನು ಭೂ ಪರಿವರ್ತನೆಗಾಗಿ (ಎನ್ಎ) ಅರ್ಜಿ ಸಲ್ಲಿಸಿದ್ದರು. ಹಾವೇರಿ ಡಿ.ಸಿ. ಕಚೇರಿ ಹಾಗೂ ಬೆಳಗಾವಿಯ ಕಚೇರಿಗೆ ಸಾಕಷ್ಟು ಬಾರಿ ಅಲೆದಾಡಿದರೂ ಅಧಿಕಾರಿಗಳು ಸ್ಪಂದಿಸಲಿಲ್ಲ. ಹೀಗಾಗಿ, ಸಾಯುವ ನಿರ್ಧಾರ ತೆಗೆದುಕೊಂಡೆ ಎಂದು ಅಳಲು ತೋಡಿಕೊಂಡರು. ರುದ್ರಯ್ಯ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಯಾವುದೇ ಅಪಾಯ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-51-831640906

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.