ಗೋಕಾಕ: ರೈತರಿಗೆ ರಸಗೊಬ್ಬರಗಳ ಪೂರೈಕೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಕೃಷಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸಲಹೆ ನೀಡಿದರು.

ಇಲ್ಲಿನ ತಾ.ಪಂ. ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕುಗಳ ಕೃಷಿ ಪರಿಕರಗಳ ಮಾರಾಟಗಾರರ ಸಭೆಯಲ್ಲಿ ಮಾತನಾಡಿದ ಅವರು, ಮುಂಗಾರು ಆರಂಭಗೊಳ್ಳುವ ಪೂರ್ವದಲ್ಲಿ ಇಲಾಖೆ ಬೀಜಗಳು ಮತ್ತು ರಸಗೊಬ್ಬರಗಳ ಅಗತ್ಯ ದಾಸ್ತಾನು ಹೊಂದುವಂತೆಯೂ ಸಲಹೆ ನೀಡಿದರು.

ಬೆಳಗಾವಿಯ ಜಂಟಿ ಕೃಷಿ ನಿರ್ದೇಶಕ ಎಚ್.ಡಿ.ಕೋಳೇಕರ ಮಾತನಾಡಿ, ಜಿಲ್ಲೆಯಲ್ಲಿ ರಸಗೊಬ್ಬರ ಮಾರಾಟಗಾರರು ಅಕ್ರಮವಾಗಿ ಮಾರಿದರೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುನ್ನೆಚ್ಚರಿಕೆ ನೀಡಿದರು.

ಚಿಕ್ಕೋಡಿ ಉಪ ವಿಭಾಗದ ಉಪಕೃಷಿ ನಿರ್ದೇಶಕ ಸಹದೇವ ಯರಗೊಪ್ಪನವರ ಅವರು ಮಾತನಾಡಿ, ಹೆಚ್ಚಿನ ಯೂರಿಯಾ ಬಳಕೆಯಿಂದ ಭೂಮಿಯ ಆರೋಗ್ಯ ಕ್ಷೀಣಿಸಿ ಇಳುವರಿಯಲ್ಲಿ ಗಣನೀಯ ಇಳಿಕೆ ಉಂಟಾಗುತ್ತದೆ. ಅದು ಮನುಷ್ಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ವರ್ತಕರು ಕೃಷಿಕರನ್ನು ಕೇವಲ ವ್ಯಾಪಾರಿ ಮನೋಭಾವದಿಂದ ಕಾಣದೇ ಬಂಧುಗಳನ್ನಾಗಿ ಕಂಡು ಯೂರಿಯಾ ಬಳಕೆ ಕಡಿಮೆ ಮಾಡುವಂತೆ ಸಲಹೆ ನೀಡಲು ತಿಳಿಸಿದರು.

ವೇದಿಕೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ, ಸಿ.ಐ.ಹೂಗಾರ, ಜಿ.ಪಂ. ಮಾಜಿ ಸದಸ್ಯ ತುಕಾರಾಮ ಕಾಗಲ, ತೋಟಗಾರಿಕೆ ಸಹಾಯಕ ನಿರ್ದೇಶಕ ಎಂ.ಎಲ್.ಜನ್ಮಟ್ಟಿ, ಝುವಾರಿ ಸಂಸ್ಥೆಯ ಪ್ರತಿನಿಧಿ ಕೃಷ್ಣಾ ಕುಲಕರ್ಣಿ, ಇಫ್ಕೋ ಸಂಸ್ಥೆಯ ನಿಖಿಲ ಗೌಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-1455479358

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.