ಮೂಡಲಗಿ: ‘ದೇಶದಲ್ಲಿ 10 ಸಾವಿರ ಎಪಿಒಗಳ ರಚನೆ ಮತ್ತು ಉತ್ತೇಜನ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 21 ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ 17 ಎಫ್ಪಿಒಗಳಿಗೆ ಒಟ್ಟು ₹1.80 ಕೋಟಿ ಈಕ್ವಿಟಿ ಅನುದಾನ ನೀಡಲಾಗಿದೆ ಮತ್ತು 4 ಅರ್ಹ ಎಫ್ಪಿಒಗಳಿಗೆ ₹34.48 ಲಕ್ಷ ಸಾಲದ ಸೌಲಭ್ಯವನ್ನು ಮಂಜೂರು ಮಾಡಲಾಗಿದೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ ಠಾಕೂರ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಪ್ರಕಟಣೆಯಲ್ಲಿ ಸೋಮವಾರ ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಎಫ್ಪಿಒ ಗಳ ರಚನೆ ಮತ್ತು ಕಾರ್ಯವೈಖರಿ ಕುರಿತು ಕೇಳಿದ ಪ್ರಶ್ನಗೆ ಉತ್ತರಿಸಿರುವ ಸಚಿವರು ಈ ಸಂಸ್ಥೆಗಳು ಪ್ರಸ್ತುತ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆಕಾಳುಗಳು, ಕಬ್ಬು ಮತ್ತು ತೋಟಗಾರಿಕಾ ಬೆಳೆಗಳ ಸಂಗ್ರಹಣೆ ಹಾಗೂ ಪ್ರಾಥಮಿಕ ಸಂಸ್ಕರಣಾ ಚಟುವಟಿಕೆಗಳಲ್ಲಿ ಹಾಗೂ ಮಾರಾಟದಲ್ಲಿ ತೊಡಗಿಸಿಕೊಂಡಿವೆ ಎಂದು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರೈತ ಸಮುದಾಯವು ಕೇವಲ ಸಾಂಪ್ರದಾಯಿಕ ಕೃಷಿಗೆ ಸೀಮಿತವಾಗದೆ, ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಮೂಲ ಉದ್ದೇಶವಾಗಿದೆ. ಮಾರುಕಟ್ಟೆಯಲ್ಲಿ ಯಾವುದೇ ಮಧ್ಯವರ್ತಿಗಳಿಗೆ ನೇರವಾಗಿ ವ್ಯಾಪಾರ ಮಾಡುವುದರಿಂದ ರೈತರ ಆದಾಯವನ್ನು ದುಪ್ಪಟ್ಟುಗೊಳಿಸಲು ಸಾಧ್ಯವಿದೆ. ಜಿಲ್ಲೆಯ ಪ್ರತಿಯೊಬ್ಬ ರೈತರು ಈ ಯೋಜನೆಗಳ ಲಾಭ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕೆಂದು ಸಚಿವರು ಮಾಹಿತಿ ನೀಡಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-21-462740411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.