ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತರು ವಶಕ್ಕೆ

Last Updated 4 ಜೂನ್ 2021, 4:29 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಹಮ್ಮಿಕೊಂಡಿರುವ ಕೋವಿಡ್ ನಿರ್ವಹಣೆ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತ ಮುಖಂಡರನ್ನು ಹಿರೇಬಾಗೇವಾಡಿ ಠಾಣೆ ಪೊಲೀಸರು ವಶಕ್ಕೆ ಪಡೆದರು.

ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ಬಾಕಿ ಬಿಲ್ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲು ಹಾಗೂ ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ರೈತರು ಬಂದಿದ್ದರು. ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರೊಂದಿಗೆ ಮುಖಂಡರು ವಾಗ್ವಾದ ನಡೆಸಿದರು.

ಮುಖಂಡರಾದ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ ಮಾತನಾಡಿ, ಕಬ್ಬಿನ ಬಾಕಿ ಬಿಲ್ ಕೊಡಿಸುವಂತೆ ಮುಖ್ಯಮಂತ್ರಿ ಅವರನ್ನು ಕೇಳಲು ಬಂದಿದ್ದೇವೆ. ತರಕಾರಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ನೀವು ಅವಕಾಶ ಕೊಡಲಿಲ್ಲವಾದರೆ
ನಾವು ಯಾರನ್ನು ಕೇಳಬೇಕು ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT