ಬೆಳಗಾವಿ: ‘ಜಿಲ್ಲೆಯಲ್ಲಿ ಈ ಸಲದ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಕೊರತೆಯಾಗದಂತೆ ನಿಗಾ ವಹಿಸಬೇಕು. ಜತೆಗೆ, ಸಾಧ್ಯವಾದಷ್ಟು ರಸಗೊಬ್ಬರ ಕಡಿಮೆ ಪ್ರಮಾಣದಲ್ಲಿ ಬಳಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಸಮರ್ಪಕ ಪೂರೈಕೆ ಮತ್ತು ಭೂತಾಯಿ ರಕ್ಷಣೆ ಕಣ್ಗಾವಲು ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕಳೆದ ಬಾರಿ ಜಿಲ್ಲೆಯಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗಿರಲಿಲ್ಲ. ಈ ಬಾರಿಯೂ ಸಮಸ್ಯೆ ತಲೆದೋರದಂತೆ ನಿಗಾ ವಹಿಸಬೇಕು’ ಎಂದು ನಿರ್ದೇಶನ ಕೊಟ್ಟರು.

‘ಕಳೆದ ಸಲ ರಸಗೊಬ್ಬರ ಬಳಕೆ ಪ್ರಮಾಣ ಕಡಿಮೆಯಾಗಿತ್ತು. ಈ ಸಲವೂ ಅಧಿಕಾರಿಗಳು, ರಸಗೊಬ್ಬರ ಪೂರೈಕೆದಾರರು ರೈತರೊಂದಿಗೆ ಸಮನ್ವಯ ಸಾಧಿಸಿ, ರಸಗೊಬ್ಬರ ಬಳಕೆ ಪ್ರಮಾಣ ತಗ್ಗಿಸಲು ಮುಂದಾಗಬೇಕು. ಅತಿಯಾಗಿ ರಸಗೊಬ್ಬರ ಬಳಕೆಯಿಂದ ಆಗುವ ದುಷ್ಪರಿಣಾಮ ಕುರಿತು ರೈತರಿಗೆ ತಿಳಿಸಬೇಕು. ಮಣ್ಣಿನ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಮನವರಿಕೆ ಮಾಡಬೇಕು’ ಎಂದರು.

‘ರಸಗೊಬ್ಬರ ಮಾರಾಟದಲ್ಲಿ ಕೃತಕ ಅಭಾವ ಸೃಷ್ಟಿಸಬಾರದು. ಕಾಳಸಂತೆಯಲ್ಲೂ ಮಾರಾಟ ಮಾಡಬಾರದು. ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಿದ ದೂರು ಕಳೆದ ವರ್ಷ ಬಂದಿದ್ದವು. ಹಾಗಾಗಿ ಈ ವಿಚಾರದಲ್ಲಿ ನಿಗಾ ವಹಿಸಬೇಕು’ ಎಂದೂ ತಿಳಿಸಿದರು.

‘ರಸಗೊಬ್ಬರ ದಾಸ್ತಾನು ಕುರಿತು ರೈತರಿಗೆ ನಿಯಮಿತವಾಗಿ ಮಾಹಿತಿ ಒದಗಿಸಬೇಕು. ರೈತರಲ್ಲಿ ವಿನಾಕಾರಣ ಗೊಂದಲ ಮೂಡಿಸಬಾರದು. ರೈತ ಸಂಘಟನೆಗಳೊಂದಿಗೆ ನಿಯಮಿತವಾಗಿ ಸಭೆ ನಡೆಸಬೇಕು’ ಎಂದೂ ನಿರ್ದೇಶನ ಕೊಟ್ಟರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ರೈತರು ತಮ್ಮ ಜಮೀನಿನಲ್ಲಿ ಯಾವ ರೀತಿಯ ಬೆಳೆ ಬೆಳೆಯಬೇಕು ಎಂಬುದರ ಕುರಿತು ರೈತರಿಗೆ ರಸಗೊಬ್ಬರ ಪೂರೈಕೆದಾರರೂ ಮಾರ್ಗದರ್ಶನ ನೀಡಬೇಕು. ಸಾವಯವ ಕೃಷಿಯತ್ತ ಒಲವು ಬೆಳೆಸಿಕೊಳ್ಳುವ ಬಗ್ಗೆ ಅಧಿಕಾರಿಗಳು ರೈತರಿಗೆ ಅರಿವು ಮೂಡಿಸಬೇಕು’ ಎಂದರು.

ಕೃಷಿ ಇಲಾಖೆ ಜಂಟಿನಿರ್ದೇಶಕ ಎಚ್.ಡಿ.ಕೋಳೆಕರ, ‘ಜಿಲ್ಲಾಮಟ್ಟದಲ್ಲಿ 10 ಹಿರಿಯ ಅಧಿಕಾರಿಗಳನ್ನು ಒಳಗೊಂಡ ರಸಗೊಬ್ಬರ ಮೇಲ್ವಿಚಾರಣೆ ಕೋಶ ರಚಿಸಲಾಗಿದೆ’ ಎಂದರು.ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕ ಮಹಾಂತೇಶ ಮುರಗೋಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-21-1561500527

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.