ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ.
ಮುಚಂಡಿ ಗ್ರಾಮದ ಸಂತೋಷ ವಟಾರ್( 34) ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ.
ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.