ಬೆಳಗಾವಿ: ಇಲ್ಲಿಂದ ಮುಂಬೈಗೆ ಶನಿವಾರ ಬೆಳಿಗ್ಗೆ ತೆರಳುತ್ತಿದ್ದ ಸ್ಟಾರ್ ಏರ್ನ ವಿಮಾನ ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಅರ್ಧಕ್ಕೆ ವಾಪಸ್ ಬಂದಿದೆ.

'ಸ್ಟಾರ್ ಏರ್ನ ಎಸ್5111 ವಿಮಾನದಲ್ಲಿ 48 ಪ್ರಯಾಣಿಕರಿದ್ದರು. ಬೆಳಿಗ್ಗೆ 7.50ಕ್ಕೆ ಟೇಕಾಫ್ ಆಗಿದ್ದ ವಿಮಾನ 8.50ಕ್ಕೆ ಮುಂಬೈನಲ್ಲಿ ಇಳಿಯಬೇಕಿತ್ತು. ಆದರೆ, ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ಮುಂಬೈಗೆ ಹೋಗದೆ ಬೆಳಗಾವಿಯಲ್ಲೇ 8.30ಕ್ಕೆ ಲ್ಯಾಂಡ್ ಆಗಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ' ಎಂದು ಸಾಂಬ್ರಾ ವಿಮಾನ ನಿಲ್ದಾಣ ನಿರ್ದೇಶಕ ಎಸ್.ತ್ಯಾಗರಾಜನ್ 'ಪ್ರಜಾವಾಣಿ'ಗೆ ತಿಳಿಸಿದರು.

'ಈ ವಿಮಾನ ತುರ್ತು ಭೂಸ್ಪರ್ಶ ಮಾಡಿಲ್ಲ. ಸಹಜವಾಗಿಯೇ ಟರ್ಮಿನಲ್ಗೆ ಬಂದು ಇಳಿದಿದೆ. ಮತ್ತೊಂದು ವಿಮಾನದಲ್ಲಿ ಪ್ರಯಾಣಿಕರನ್ನು ಕಳುಹಿಸಲಾಗಿದೆ' ಎಂದರು.

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ಆತಂಕಗೊಂಡಿದ್ದರು. ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದರಿಂದ ಅನಾಹುತವೊಂದು ತಪ್ಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.