ಬೆಳಗಾವಿ: ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಅಡಿ ಬಾಲ ಭವನ ಸೊಸೈಟಿ ಸಹಯೋಗ ದೊಂದಿಗೆ 5ರಿಂದ 16 ವರ್ಷದ ಮಕ್ಕಳಿಗಾಗಿ 15 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ಏ.16 ರಿಂದ 30 ರವರೆಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಭಾರತ ಕಾಲೊನಿಯ (ಕಣಬರ್ಗಿ ರಸ್ತೆಯ) ಮಹಿಳಾ ಕಲ್ಯಾಣ ಸಂಸ್ಥೆಯ ಸಭಾಗೃಹದಲ್ಲಿ ಆಯೋಜಿಸಲಾಗಿದೆ.

ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅನುಕೂಲವಾಗುವ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಾಮೂಹಿಕ ನೃತ್ಯ, ಸಾಮೂಹಿಕ ಸಂಗೀತ, ಕರಾಟೆ, ಯೋಗ, ಧ್ಯಾನ, ಸ್ಥಳೀಯ ಆಟಗಳು ಹಾಗೂ ನಾಟಕ ಕಾರ್ಯಕ್ರಮಗಳನ್ನು ಅಯೋಜಿಸಲಾಗುವುದು. ಶಿಬಿರದಲ್ಲಿ ಭಾಗವಹಿಸಲು ಇಚ್ಚಿಸುವ ವಿದ್ಯಾರ್ಥಿಗಳು ಏ.15 ರ ಒಳಗೆ ಹೆಸರು ನೊಂದಾಯಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ– ಎಸ್. ಚೌಗಲಾ ದೂರವಾಣಿ ಸಂ. 9663218860 ಮತ್ತು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ, ಬೆಳಗಾವಿ (0831-2407236) ಇವರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಬಾಲ ಭವನ ಕಾರ್ಯದರ್ಶಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-21-1089123236

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.