ಘಟಪ್ರಭಾ (ಬೆಳಗಾವಿ ಜಿಲ್ಲೆ): ಘಟಪ್ರಭಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ಹಿಡ್ಕಲ್ ಜಲಾಶಯದಿಂದ ಕೂಡಲೆ ನೀರು ಹರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಇಲ್ಲಿನ ಮೃತ್ಯುಂಜಯ ವೃತ್ತದಲ್ಲಿ ಮಂಗಳವಾರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಚೂನಪ್ಪ ಪೂಜಾರಿ ಅವರು, ಅಧಿಕಾರಿಗಳು ನೀರು ಬಿಡಲು ವಿಳಂಬ ಮಾಡುವುದರಿಂದ ದನ-ಕರುಗಳಿಗೆ ಕುಡಿಯಲು ನೀರಿಲ್ಲದೆ ಸಾಯುವ ದುಃಸ್ಥಿತಿ ಎದುರಾಗುತ್ತಿದೆ. ಬೆಳೆಗಳು ಸಂಪೂರ್ಣ ನಾಶವಾಗಿವೆ. ಸರ್ಕಾರ ರೈತರ ಬಗ್ಗೆ ನಿರ್ಲಕ್ಷ ಧೋರಣೆ ಅನುಸರಿಸುತ್ತಿದೆ. ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ತೂಕದಲ್ಲಿ ಮೋಸ ಮಾಡಿ ರೈತರಿಗೆ ವಂಚನೆ ಮಾಡುತ್ತಿದ್ದಾರೆ, ಆದ್ದರಿಂದ ಎಲ್ಲಾ ಕಡೆ ಸರ್ಕಾರಿಂದ ತೂಕದ ಯಂತ್ರ ಅಳವಡಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಗೌರವ ಅಧ್ಯಕ್ಷ ಶಶಿಕಾಂತ ಗುರೂಜಿ ಮಾತನಾಡಿ, ರೈತರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಬಾಳಿನುದ್ದಕ್ಕೂ ಸಂಪೂರ್ಣ ಹೋರಾಟ ಮಾಡುವುದಾಗಿದೆ ಎಂದರು.

ಸ್ಥಳಕ್ಕೆ ಧಾವಿಸಿದ ಗೋಕಾಕ ತಾಲ್ಲೂಕು ದಂಡಾಧಿಕಾರಿ ಮೋಹನ ಭಸ್ಮೆ ಅವರು ಜಿಲ್ಲಾಧಿಕಾರಿಗಳ ಜತೆ ದೂರವಾಣಿಯಲ್ಲಿ ರೈತರ ಸಮ್ಮುಖದಲ್ಲಿ ಮಾತನಾಡಿದರು. ಕೂಡಲೆ ಪ್ರಾದೇಶಿಕ ಆಯುಕ್ತರ ಜತೆ ಸಭೆ ನಡೆಸಿ ಏಪ್ರಿಲ್ 2ನೇ ದಿನಾಂಕದೊಳಗಾಗಿ ಕಾಲುವೆಗಳಿಗೆ ನೀರು ಹರಿಸುವ ಭರವಸೆ ನೀಡಿದ ನಂತರ ರೈತರು ಪ್ರತಿಭಟನೆಯನ್ನು ತಾತ್ಕಲಿಕವಾಗಿ ಹಿಂಪಡೆದರು.

ರೈತರ ದಿಢೀರ್ ಪ್ರತಿಭಟನೆ ನಡೆಸಿದ್ದರಿಂದ ಸುಮಾರು ಎರಡು ಘಂಟೆಗಳಿಗೂ ಹೆಚ್ಚು ಕಾಲ ವಾಹನಗಳ ಸಂಚಾರ ಸ್ಥಗಿತವಾಗಿ ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡಿದರು. ಪ್ರತಿಭಟನಾ ಸ್ಥಳದಲ್ಲಿ ನೀರಾವರಿ, ಹೆಸ್ಕಾಂ, ಕಂದಾಯ ಮತ್ತು ಪೊಲೀಸ್ ಇಲಾಖೆಗಳ ಅಧಿಕಾರಿಗಳು ಇದ್ದು ಪರಿಸ್ಥಿತಿಯನ್ನು ಅವಲೋಕಿಸಿ, ಶಾಂತತೆ ಕದಡದಂತೆ ನಿಗಾ ವಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-20-1570397059

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.