ಬೆಳಗಾವಿ: ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ನ 2025–26ನೇ ಸಾಲಿನ ವಿದ್ಯಾರ್ಥಿ ಸಂಘ, ಕ್ರೀಡಾ ಸಂಘ, ಎನ್ಎಸ್ಎಸ್ ಘಟಕಗಳು ಹಾಗೂ ಇತರೆ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

ಸರ್ಕಾರಿ ವಿಮಾ ಇಲಾಖೆಯ ಬೆಳಗಾವಿ ವಿಭಾಗದ ಪ್ರಭಾರ ಉಪನಿರ್ದೇಶಕ ಜಗನ್ನಾಥರಾವ್ ಕಠಾರೆ, ‘ವಿದ್ಯಾರ್ಥಿಗಳು ಪರಿಶ್ರಮದ ಮೂಲಕ ವೃತ್ತಿಬದುಕು ಕಟ್ಟಿಕೊಳ್ಳಬೇಕು’ ಎಂದು ಕರೆಕೊಟ್ಟರು.

ಮುಧೋಳದ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ಮೋಹನಕುಮಾರ ಡಿ., ‘ಇದು ಕೃತಕ ಬುದ್ಧಿಮತ್ತೆ(ಎಐ) ಯುಗ. ವಿದ್ಯಾರ್ಥಿಗಳು ತಂತ್ರಜ್ಞಾನದ ಸದುಪಯೋಗ ಮಾಡಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯ ವಾಸುದೇವ ಅಪ್ಪಾಜಿಗೋಳ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ತಮ್ಮಣ್ಣ ಢವಳೇಶ್ವರ ಇತರರಿದ್ದರು. ಐಶ್ವರ್ಯ ರೊಡಬಸನ್ನವರ ಸ್ವಾಗತಿಸಿದರು. ಸಾವಿತ್ರಿ ಹಳ್ಳಿ ವಂದಿಸಿದರು. ಸವಿತಾ ಲಕ್ಷ್ಮನ್ನವರ ಮತ್ತು ವಿದ್ಯಾ ಗುಂಡಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-21-395472967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.