ಬೆಳಗಾವಿಯಲ್ಲಿ ಮುಂದುವರಿದ ಮಳೆ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿದಿದೆ. ಆಗಾಗ ಜೋರಾಗಿ ಬೀಳುತ್ತಿದೆ.
ಗುರುವಾರ ರಾತ್ರಿಯಿಂದಲೂ ವರ್ಷಧಾರೆ ಮುಂದುವರಿದಿದೆ. ಇದರಿಂದ ಜನ ಜೀವನದ ಮೇಲೆ ಪರಿಣಾಮ ಉಂಟಾಗಿದೆ.
ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಮುಂಜಾನೆ ವಿವಿಧೆಡೆ ಸಂಚರಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಕೆಲವೆಡೆ ರಸ್ತೆಗಳಲ್ಲಿ ನೀರು ಸಂಗ್ರಹವಾಗಿದೆ. ಮನೆಗಳಿಗೆ ನೀರು ನುಗ್ಗಿಲ್ಲ. ನೀರು ಸರಾಗವಾಗಿ ಹರಿದು ಹೋಗುವಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.