ಬೆಳಗಾವಿ: ‘ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆ ಉಂಟು ಮಾಡುತ್ತದೆ’ ಎಂದು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ ಡಾ. (ಕರ್ನಲ್) ಎಂ. ದಯಾನಂದ ಹೇಳಿದರು.

ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಅಂಗವಾಗಿ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಹೃದ್ರೋಗ ವಿಭಾಗವು ಈಚೆಗೆ ಏರ್ಪಡಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

‘ಯುವಕರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವುದು ಅತ್ಯಂತ ಅಪಾಯಕಾರಿ. ಇತ್ತೀಚಿನ ದಿನಗಳಲ್ಲಿ ಆಹಾರ ಪದ್ದತಿ ಹಾಗೂ ಕೆಲಸದ ಒತ್ತಡದಿಂದ ರಕ್ತದೊತ್ತಡವು ಕಂಡು ಬರುತ್ತಿದೆ. ಮುಂಜಾಗೃತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ವಿಭಾಗ ಮುಖ್ಯಸ್ಥ ಡಾ.ಸಂಜಯ ಪೋರವಾಲ ಮಾತನಾಡಿ, ‘ಅಧಿಕ ರಕ್ತದೊತ್ತಡವು ಯಾವುದೇ ಗುಣಲಕ್ಷಣಗಳನ್ನು ಹೊಂದಿರುವುದಿಲ್ಲ. ಆದರೆ, ಇದು ಹೃದಯಾಘಾತ, ಪಾರ್ಶ್ವವಾಯು, ಮೂತ್ರಪಿಂಡ ಖಾಯಿಲೆ ಹಾಗೂ ಅಕಾಲಿಕ ಮರಣದ ಅಪಾಯವನ್ನು ಹೆಚ್ಚಿಸುತ್ತದೆ’ ಎಂದರು.

ಹಿರಿಯ ಹೃದ್ರೋಗ ತಜ್ಞವೈದ್ಯರಾದ ಡಾ.ಸುರೇಶ ಪಟ್ಟೇದ, ಡಾ.ಸಮೀರ ಅಂಬರ, ಡಾ.ವಿಜಯಾನಂದ ಮೆಟಗುಡಮಠ, ಡಾ.ಪ್ರಸಾದ ಎಂ.ಆರ್., ಡಾ.ಸುಹಾಸಿನಿ ಅಗರ್ಥಾ, ಡಾ.ವಿಶ್ವನಾಥ ಹೆಸರೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-21-1911149429

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.