ಬೆಳಗಾವಿ: ಶಾಲಾ–ಕಾಲೇಜುಗಳಿಗೆ ಹಿಜಾಬ್ ಧರಿಸಿಕೊಂಡು ಹೋಗಲು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ, ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಸರಿ ಶಾಲೆ ಹಂಚಲು ತೆರಳುತ್ತಿದ್ದರು. ಆಗ ಪೊಲೀಸರು ವಶಕ್ಕೆ ಪಡೆದಾಗ ಪರಸ್ಪರರ ಮಧ್ಯೆ ವಾಗ್ವಾದವಾಯಿತು.

‘ರಾಜ್ಯ ಸರ್ಕಾರ ಮುಸ್ಲಿಮರ ಓಲೈಕೆ ಜತೆಗೆ, ಮಕ್ಕಳ ಮನಸ್ಸು ಹದಗೆಡಿಸಲು ಮುಂದಾಗಿದೆ. ಶಾಲಾ–ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸದಿದ್ದರೆ, ಪ್ರತಿ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳಿಗೆ ಕೇಸರಿ ಧ್ವಜ ಹಂಚುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.

ಶ್ರೀರಾಮಸೇನೆ ಮುಖಂಡ ರವಿಕುಮಾರ ಕೋಕಿತಕರ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-21-1464087547

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.