ಬೆಳಗಾವಿ: ‘ಜಿಲ್ಲೆಯ ರಾಮದುರ್ಗ ಪಟ್ಟಣದ ಕೊಳೆಗೇರಿಯಲ್ಲಿ 600 ಮನೆಗಳನ್ನು ನಿರ್ಮಿಸಲಾಗಿದೆ’ ಎಂದು ಖೊಟ್ಟಿ ದಾಖಲೆ ಸೃಷ್ಟಿಸಿ ₹23.35 ಕೋಟಿ ಹಣ ಲಪಟಾಯಿಸಿದ ಆರೋಪದ ಮೇಲೆ ಇಲ್ಲಿನ ಕೊಳೆಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ವಿವಿಧೆಡೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತರು ಮಂಗಳವಾರ ದಾಳಿ ನಡೆಸಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ನಿವೃತ್ತ) ಬಿ.ಎಸ್. ಶಂಭುಲಿಂಗಪ್ಪ ಮತ್ತು ಗುತ್ತಿಗೆದಾರ ಎನ್.ಪಿ.ಪ್ರಸಾದ್ ಸೇರಿ ಕೃತ್ಯದಲ್ಲಿ ಪಾಲ್ಗೊಂಡ ಇತರರ ವಿರುದ್ಧ ಲೋಕಾಯುಕ್ತ ಪಿಎಸ್ಐ ಪ್ರಸನ್ನ ದೇಸಾಯಿ ದೂರು ದಾಖಲಿಸಿದರು. ಇನ್ಸ್ಪೆಕ್ಟರ್ ಎಸ್.ಎಚ್. ಹೊಸಮನಿ ಅವರ ನೇತೃತ್ವದಲ್ಲಿ ದಾಳಿ ಮಾಡಿದರು.

‘ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸರ್ವರಿಗೂ ಸೂರು (ನಗರ)–2022 ಕಾರ್ಯಕ್ರಮದಡಿ 600 ಮನೆ ನಿರ್ಮಿಸಲಾಗಿದೆ ಎಂದು ದಾಖಲೆ ತೋರಿಸಿ, ಅನುದಾನ ಪಡೆಯಲಾಗಿದೆ. ಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಮತ್ತು ಗುತ್ತಿಗೆದಾರ ಸೇರಿ ಸಂಚು ರೂಪಿಸಿ ಹಣ ಪಡೆದಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಲೋಕಾಯುಕ್ತ ಎಸ್ಪಿ ಹಣಮಂತರಾಯ ತಿಳಿಸಿದರು.

2019ರಿಂದ 2024ರವರೆಗೆ ವಿವಿಧ ಹಂತಗಳಲ್ಲಿ ₹29.45 ಕೋಟಿ ಬಿಲ್ ತೆಗೆಯಲಾಗಿದೆ. ಸಿಮೆಂಟ್, ಕಬ್ಬಿಣ, ಇಟ್ಟಿಗೆ ಮುಂತಾದ ನಿರ್ಮಾಣ ಸಾಮಗ್ರಿಗಳಿಗೆ ₹6.10 ಕೋಟಿ ವ್ಯಯಿಸಲಾಗಿದೆ. 600 ಫಲಾನುಭವಿಗಳಿಗೆ ತಲಾ ₹1.10 ಲಕ್ಷ ಹಣ ಸಂದಾಯ ಮಾಡಿ ನೀವೇ ಮನೆ ಕಟ್ಟಿಕೊಳ್ಳಬೇಕು ನಿಯಮಬಾಹಿರ ಕ್ರಮವಹಿಸಲಾಗಿದೆ.

ಇದನ್ನು ಹೊರತುಪಡಿಸಿ ಯಾವುದೇ ಕಾಮಗಾರಿ ಮಾಡಿಲ್ಲ. ಜಿಪಿಎಸ್ ಇಲ್ಲದೆಯೇ, ಕಾಮಗಾರಿ ಮುಗಿಸಲಾಗಿದೆ ಎಂದು ಹಣ ಮಂಜೂರು ಮಾಡಿಸಿಕೊಂಡು, ಖೊಟ್ಟಿ ಬಿಲ್ ತೆಗೆಯಲಾಗಿದೆ. ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಬೆಳಗಾವಿಯ ವಿಭಾಗ ಮತ್ತು ಉಪವಿಭಾಗದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದಾಗ ಈ ಅಪರಾಧ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ದಾಳಿ: ‘ಬೆಳಗಾವಿಯ ಹಿಂಡಲಗಾದ ಕೊಳೆಗೇರಿ ಅಭಿವೃದ್ಧಿ ಮಂಡಳಿ ಕಚೇರಿ, ಹುಬ್ಬಳ್ಳಿಯ ವಿದ್ಯಾನಗರದ ಶಿರೂರ ಪಾರ್ಕ್ನಲ್ಲಿರುವ ಶಂಭುಲಿಂಗಪ್ಪ ಅವರ ಮನೆ, ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನ್ಯಾಷನಲ್ ಪ್ರಾಜೆಕ್ಟ್ ಕನ್ಸ್ಟ್ರಕ್ಷನ್ ಕಾರ್ಪೊರೇಶನ್ ಲಿಮಿಟೆಡ್ ಕಚೇರಿ, ವಿಜಯಪುರದ ಗಿರಿಮಲ್ಲಪ್ಪ ಜೋಗೂರ ಅವರ ಮನೆ, ಬಾಗಲಕೋಟೆ ಜಿಲ್ಲೆಯ ಮುಧೋಳದ ಕಿರಣ ಹೊಸಕೋಟಿ ಅವರ ಮನೆ, ಬೆಲ್ಕೆರೂರಿನ ರಿಂದನಗೌಡ ಶೇಖರಗೌಡ ಪಾಟೀಲ ಮನೆ ಮೇಲೂ ಏಕಕಾಲಕ್ಕೆ ದಾಳಿ ಮಾಡಲಾಯಿತು’ ಎಂದು ತನಿಖಾಧಿಕಾರಿ ಇನ್ಸ್ಪೆಕ್ಟರ್ ವೆಂಕಟೇಶ ಯಡಹಳ್ಳಿ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-51-802272851

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.