ಬೆಳಗಾವಿ: ‘ಬುದ್ಧ, ಬಸವ, ಅಂಬೇಡ್ಕರ್ ಯೋಜನೆ’ಯನ್ನು ಲೋಕೋಪಯೋಗಿ ಇಲಾಖೆಯಿಂದ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಅದರಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಲಾಗುತ್ತಿದೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ರಾಜ್ಯದಾದ್ಯಂತ ಪರಿಶಿಷ್ಟ ಸಮುದಾಯಗಳ ಫಲಾನುಭವಿಗಳಿಗೆ ಸರ್ಕಾರ ನಿವೇಶನಗಳನ್ನು ಹಂಚಿಕೆ ಮಾಡಿದೆ. ಆದರೆ, ಪಟ್ಟಣಗಳು ಮತ್ತು ಹಳ್ಳಿಗಳ ಹೊರವಲಯದಲ್ಲಿನ ನಿವೇಶನಗಳು ಅಭಿವೃದ್ಧಿಯಾಗದ ಕಾರಣ, ಅವುಗಳಿಂದ ಫಲಾನುಭವಿಗಳು ದೂರವಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಲೋಕೋಪಯೋಗಿ ಇಲಾಖೆಯು ಖಾಸಗಿ ಬಡಾವಣೆಗಳಂತೆಯೇ ನಿವೇಶನಗಳನ್ನು ಅಭಿವೃದ್ಧಿಪಡಿಸುತ್ತದೆ. ಚರಂಡಿ, ರಸ್ತೆ, ಕುಡಿಯುವ ನೀರು ಸರಬರಾಜು, ಉದ್ಯಾನ ಒದಗಿಸುತ್ತದೆ. ಸಾಧ್ಯವಾದರೆ ಅಂಗನವಾಡಿ ಮತ್ತು ಶಾಲಾ ಕಟ್ಟಡಗಳನ್ನು ನಿರ್ಮಿಸುತ್ತದೆ’ ಎಂದು ಹೇಳಿದರು.

‘ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಿಂದ ಬರುವ ₹20 ಕೋಟಿ ಯನ್ನು ಪ್ರಾಯೋಗಿಕವಾಗಿ ನಿವೇಶನಗಳ ಅಭಿವೃದ್ಧಿಗೆ ಬಳಸಲಾಗುವುದು’ ಎಂದರು.

‘ಮೊದಲ ಹಂತದಲ್ಲಿ 42 ಎಕರೆಯಲ್ಲಿ ಬೆಳಗಾವಿ ಜಿಲ್ಲೆಯ ಗುಮಚನಮರಡಿ, ಹುಕ್ಕೇರಿ ತಾಲ್ಲೂಕಿನ ಹರಗಾಪುರ, ಮೂಡಲಗಿ ತಾಲ್ಲೂಕಿನ ಅರಭಾವಿ, ಸವದತ್ತಿ, ಬಳ್ಳಾರಿ ಜಿಲ್ಲೆಯ ಕುರುಗೋಡು ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಪ್ರಾಯೋಗಿಕ ಯೋಜನೆಯ ಸಾಧಕ-ಬಾಧಕ ಅಂಶಗಳನ್ನು ಪರಿಶೀಲಿಸಿ, ರಾಜ್ಯದಾದ್ಯಂತ ಒಂದು ಸಾವಿರ ಎಕರೆ ಜಾಗದಲ್ಲಿ ಬಡಾವಣೆ ಅಭಿವೃದ್ಧಿಪಡಿಸಲಾಗುವುದು’ ಎಂದರು.

‘ನಗರಸಭೆ, ಪಟ್ಟಣ ಪಂಚಾಯಿತಿ,ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನೆ ಅನುಷ್ಠಾನಕ್ಕೆ ಕ್ರಮವಹಿಸಲಾಗಿದೆ. ಶೀಘ್ರವೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಎರಡನೇ ಹಂತದಲ್ಲಿ ಅಗತ್ಯಕ್ಕೆ ತಕ್ಕಂತೆ ಖಾಸಗಿ ಜಮೀನು ಖರೀದಿಸಿ ಬಡಾವಣೆ ನಿರ್ಮಾಣ ಮಾಡಲಾಗುವುದು’ ಎಂದು ವಿವರಿಸಿದರು.

ಶಾಸಕ ಆಸಿಫ್ ಸೇಠ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.