ಎಂ.ಕೆ.ಹುಬ್ಬಳ್ಳಿ: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೈಗೊಂಡ ತುಂಬುಕೆರೆ ಹೂಳೆತ್ತುವ ಕಾರ್ಯಕ್ಕೆ ಎಲ್ಲರೂ ಸಹಕಾರ ನೀಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.

ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ ಪಟ್ಟಣದ ತುಂಬುಕೆರೆ ಹೂಳೆತ್ತುವ ಕಾರ್ಯಕ್ಕೆ ಗುರುವಾರ ಪೂಜೆ ನೆರವೇರಿಸಿ ಮಾತನಾಡಿದರು.

‘ಸರ್ಕಾರ ಮಾಡುವಂತ ಕಾರ್ಯವನ್ನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ. ಸಮಾಜಮುಖಿ ಕಾರ್ಯದಲ್ಲಿ ತೊಡಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ. ನಾವೆಲ್ಲರೂ ಕೆರೆಗಳ ಮಹತ್ವ ಅರಿಯಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ಹೂಳೆತ್ತಿಕೊಟ್ಟ ಕೆರೆ ಕಲ್ಮಶ ಮಾಡದೇ, ಸ್ವಚ್ಛವಾಗಿಟ್ಟುಕೊಳ್ಳಬೇಕು’ ಎಂದರು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ ನಾಯಕ್, ತಾಲ್ಲೂಕು ಯೋಜನಾಧಿಕಾರಿ ಯೋಗೀಶ ಬಿ.ಆರ್, ಎಂ.ಕೆ.ಹುಬ್ಬಳ್ಳಿ ವಲಯ ಮೇಲ್ವಿಚಾರಕ ಜನಾರ್ಧನ್, ಕೆರೆ ಅಭಿವೃದ್ಧಿ ಸಮಿತಿ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುರೇಶ ಮುತ್ನಾಳ, ಉಪಾಧ್ಯಕ್ಷೆ ಲಕ್ಷ್ಮಿ ನಾಗನೂರ, ಮುಖ್ಯಾಧಿಕಾರಿ ರವಿಶಂಕರ ಮಾಸ್ತಿಹೊಳಿಮಠ, ಎನ್.ಸಿ.ಗಣಾಚಾರಿ, ಎಫ್.ಎಫ್.ಸಕ್ರೆನ್ನವರ, ಅದೃಶ್ಯಪ್ಪ ಗದ್ದಿಹಳ್ಳಿ, ಜಾವೀದ ಜಮಾದಾರ, ಸೇವಾ ಪ್ರತಿನಿಧಿಗಳು, ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ನವಜೀವನ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಪಟ್ಟಣದ ನಾಗರಿಕರು, ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-21-1251319491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.