ಸೋಮವಾರ, ಜೂನ್ 21, 2021
27 °C

ಬೆಳಗಾವಿ: ತುಂತುರು ಮಳೆಯಲ್ಲೇ ಸ್ವಾತಂತ್ರ್ಯೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಆಚರಣೆ ಕಾರ್ಯಕ್ರಮ ತುಂತುರು ಮಳೆಯ ನಡುವೆಯೂ ಸಂಭ್ರಮದಿಂದ ನೆರವೇರಿತು.

ಕೊರೊನಾ ಕಾರಣದಿಂದ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳಲಿಲ್ಲ. ಅಧಿಕಾರಿಗಳು, ಪೊಲೀಸರು, ಮಾಧ್ಯಮ ಪ್ರತಿನಿಧಿಗಳಷ್ಟೇ ಪಾಲ್ಗೊಂಡಿದ್ದರು.

ತುಂತುರು ಮಳೆಯ ನಡುವೆಯೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಧ್ವಜಾರೋಹಣ ನೆರವೇರಿಸಿದರು. ತೆರೆದ ವಾಹನದಲ್ಲಿ ತೆರಳಿ ತಂಡಗಳ ಪರಿವೀಕ್ಷಣೆ ನಡೆಸಿದರು.

ಪೊಲೀಸರು, ಅಬಕಾರಿ, ಅರಣ್ಯ ಇಲಾಖೆ, ಅಗ್ನಿಶಾಮಕ ದಳದ ತುಕಡಿಗಳಷ್ಟೇ ಪಥಸಂಚಲನದಲ್ಲಿ ಪಾಲ್ಗೊಂಡಿದ್ದವು. ಕೊರೊನಾ ಭೀತಿಯ ಕಾರಣದಿಂದ ಶಾಲಾ- ಕಾಲೇಜು ಮಕ್ಕಳಿಗೆ ಪಥಸಂಚಲನದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ‌.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು