ಬೆಳಗಾವಿ: ‘ಜಲ ಜೀವನ ಮಿಷನ್’ ಅಡಿಯಲ್ಲಿ ಪ್ರತಿ ಗ್ರಾಮೀಣ ಮನೆಗೂ ನಲ್ಲಿ ನೀರು ಒದಗಿಸುವ ಯೋಜನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಸಮರ್ಪಕವಾಗಿ ಜಾರಿಗೊಳಿಸಬೇಕು. ಕೇಂದ್ರದ ವಿವಿಧ, ಯೋಜನೆಗಳು ಯಾವುದೇ ಅಡೆತಡೆಯಿಲ್ಲದೆ ಪೂರ್ಣಗೊಳಿಸಬೇಕು’ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಸೂಚಿಸಿದರು.

ಸುವರ್ಣ ವಿಧಾನ ಸೌಧದ ವಿಡಿಯೊ ಕಾನ್ಫರೆನ್ಸ್ ಹಾಲ್ನಲ್ಲಿ ಮಂಗಳವಾರ ನಡೆದ 2026-27ನೇ ಸಾಲಿನ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನರೇಗಾ ಕಾಮಗಾರಿಗಳನ್ನುರಾಜಕೀಯವಾಗಿ ಯಾವುದೇ ಹಸ್ತಕ್ಷೇಪ ಇಲ್ಲದೇ ನಿಯಮಸುವಾರ ಕೈಗೆತ್ತಿಕೊಳ್ಳಬೇಕು. ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಜಲ ಜೀವನಮಿಷನ್ ಕೆಲವು ಗ್ರಾಮಗಳಲ್ಲಿ ಪರಿಪೂರ್ಣವಾಗಿ ಅನುಷ್ಠಾನವಾಗಿಲ್ಲ. ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಇರುವ ಕಾರಣ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆಗಳು ಈಗಾಗಲೇ ಪ್ರಾರಂಭವಾಗಿದ್ದು, ಕೂಡಲೇ ಅಂತಹ ಪ್ರದೇಶಗಳನ್ನು ಗುರುತಿಸಿ ಕುಡಿಯುವ ನೀರು ಪೂರೈಕೆಗೆ ಸಮರ್ಪಕ ಅನುಷ್ಠಾನ ಮಾಡಬೇಕು’ ಎಂದರು.

ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಅಲ್ಲದೇ ಅಗತ್ಯದ ಜೌಷಧಿಗಳನ್ನು ದಾಸ್ತಾನು ಮಾಡಿಕೊಳ್ಳುವಂತೆ’ಸೂಚಿಸಿದರು.

ಇ–ಸ್ವತ್ತು ಅಡಿ ಪ್ರಮಾಣ ಪತ್ರಗಳನ್ನು ತ್ವರಿತವಾಗಿ ವಿತರಿಸಲು ಕ್ರಮ ಕೈಗೊಳ್ಳಬೇಕು. ವಿದ್ಯುತ್ ಪರಿವರ್ತಕಗಳ ದುರಸ್ತಿ ಕುರಿತು ರೈತರಿಂದ ದೂರುಗಳು ಬರುತ್ತಿದ್ದು, ವಿದ್ಯುತ್ ಪರಿವರ್ತಕಗಳ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಸ್ಮಶಾನಗಳ ಅಭಿವೃದ್ಧಿ ಕುರಿತು ಕ್ರಮ ಕೈಗೊಳ್ಳಬೇಕು. ಅಡುಗೆ ಅನಿಲ ಹಾಗೂ ಪೆಟ್ರೋಲ್ ದಾಸ್ತಾನು ಸ್ಥಿತಿಗತಿ ಕುರಿತು ಮಾಹಿತಿ ಪಡೆದು, ಜಿಲ್ಲೆಯಲ್ಲಿ ಕೊರತೆ ಪೆಟ್ರೋಲ್ ಹಾಗೂ ಅಡುಗೆ ಅನಿಲದ ಕೊರತೆ ಆಗದಂತೆ ನಿಗಾ ವಹಿಸಲು ಶೆಟ್ಟರ್ ತಿಳಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ‘ಪ್ರಧಾನಮಂತ್ರಿ ಗ್ರಾಮ ಸಡಕ್ ಹಾಗೂ ಗ್ರಾಮಪಥ್ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ತಾಲ್ಲೂಕುಗಳಲ್ಲಿ ಅಗತ್ಯ ಅನುಗುಣವಾಗಿ ಕೈಗೊಳ್ಳಿ. ರೈತರ ಶ್ರೇಯೊಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದು ಬ್ಯಾಂಕ್ ಸಬ್ಸಿಡಿಗಳನ್ನು ಸಹ ನೀಡುತ್ತಿದೆ. ಬ್ಯಾಂಕುಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದರ ಮೂಲಕ ಬ್ಯಾಂಕ್ ವತಿಯಿಂದ ಒದಗಿಸಲಾಗುವ ಬ್ಯಾಂಕ್ ಸಾಲ ಹಾಗೂ ಸಬ್ಸಿಡಿಗಳನ್ನು ಕಾಲ ಮಿತಿಯೊಳಗೆ ಒದಗಿಸಿ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ‘ಕುಡಿಯುವ ನೀರು ಸಮಸ್ಯೆಯಿರುವ ಊರುಗಳಿಗೆ ನೀರು ಪೂರೈಕೆಗೆ ಚಿಕ್ಕೋಡಿ ಭಾಗದಲ್ಲಿ 22 ಬೋರ್ವೆಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಸ್ವಂತ ವಾಟರ್ ಟ್ಯಾಂಕರ್ಗಳು ಇವೆ’ ಎಂದರು.

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ದಿಶಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರು, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಮಹಾಂತೇಶ ಮುರಗೋಡ, ಡಿಸಿಪಿ ನಾರಾಯಣ ಭರಮಣಿ, ಪಾಲಿಕೆ ಆಯುಕ್ತ ಎಂ. ಕಾರ್ತಿಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಈಶ್ವರ ಗಡಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-21-205166119

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.