ಬೆಳಗಾವಿ: ಇಲ್ಲಿನ ನೆಹರೂ ನಗರದ ಕನ್ನಡ ಭವನದ ವಿಷಯ ಮತ್ತು ಪಾಲಿಕೆಯ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯಗಳನ್ನು ಅಂಗಿಕರಿಸಬೇಕೆಂಬ ಕನ್ನಡ ಸಂಘಟನೆಗಳ ಒತ್ತಾಯದ ಬಗ್ಗೆ ಮಹಾನಗರ ಪಾಲಿಕೆಯಲ್ಲಿ ಏ.2ರಂದು ಜರುಗಿದ ಕನ್ನಡ ಜಾಗೃತಿ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಯಿತು.

ಸಮಿತಿಯ ಸದಸ್ಯ ರಾಜಶೇಖರ ತಳವಾರ ಅವರು ಈ ನಿರ್ಣಯಗಳನ್ನು ಸಭೆಯಲ್ಲಿ ಮಂಡಿಸಿದರು. ಪಾಲಿಕೆಯ ಜಾಗೆಯಲ್ಲಿ, ರಾಜ್ಯ ಸರ್ಕಾರದ ಅನುದಾನದಲ್ಲಿ ನೆಹರೂ ನಗರದಲ್ಲಿ ನಿರ್ಮಿಸಿದ ಕನ್ನಡ ಭವನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಮುಂದಿನ ಕ್ರಮ ಕೈಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಲ್ಲದೇ, ಕರ್ನಾಟಕ ಪರವಾಗಿ ಗೊತ್ತುವಳಿಗಳನ್ನು ಅಂಗಿಕರಿಸಲು ಮೇಯರ್ ಅವರನ್ನು ವಿನಂತಿಸಲು ಸಭೆ ನಿರ್ಧರಿಸಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-21-1751486148

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.