ಬೆಳಗಾವಿ ಪಾಲಿಕೆ ಎದುರು ಕನ್ನಡ ಧ್ವಜ ಹಾರಿಸಿದ್ದ ತಾಳೂಕರ ಅಂಗಡಿ ಸುಡಲು ಯತ್ನ
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ ಮುಂಭಾಗ ಈಚೆಗೆ ಧ್ವಜಸ್ತಂಭ ಸ್ಥಾಪಿಸಿ ಕನ್ನಡ ಬಾವುಟ ಹಾರಿಸಿದ್ದ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ ಅವರ ಅಂಗಡಿಗೆ ಕಿಡಿಗೇಡಿಗಳು ಶುಕ್ರವಾರ ಬೆಳಗಿನ ಜಾವ 2ರ ಸುಮಾರಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಲು ಯತ್ನಿಸಿದ್ದಾರೆ.
ಶಹಾಪುರದಲ್ಲಿ ಅವರ ಮನೆ ಸಮೀಪದಲ್ಲೇ ಕನ್ನಡ ಬಾವುಟಗಳು, ಶಲ್ಯಗಳನ್ನು ಮಾರುವ ಅಂಗಡಿ ಇದೆ. ಅದರ ಬಾಗಿಲಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ತಕ್ಷಣ ಗಮನಿಸಿದ ತಾಳೂಕರ ಕುಟುಂಬದವರು ಅನಾಹುತ ತಪ್ಪಿಸಿದರು.
ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಪ್ರತಿಕ್ರಿಯಿಸಿದ ಶ್ರೀನಿವಾಸ, ‘ನಾನು ಎಂದಿಗೂ ಭಾಷಾ ದ್ವೇಷ ಮಾಡಿಲ್ಲ. ಇಂತಹ ಬೆದರಿಕೆಗೆ ಹಾಗೂ ಬೆಂಕಿ ಹಚ್ಚಿದ್ದಕ್ಕೆ ಹೆದರುವುದಿಲ್ಲ. ವೈಯಕ್ತಿಕ ಹಿತಾಸಕ್ತಿಗಾಗಿ ನಾನು ಹೋರಾಟ ಮಾಡುತ್ತಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.