ಬೆಳಗಾವಿ: ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಏಪ್ರಿಲ್ ಎರಡನೇ ವಾರ ಮುಖ್ಯಮಂತ್ರಿ, ಗಡಿ ಉಸ್ತುವಾರಿ ಸಚಿವರ ಭೇಟಿಗಾಗಿ 12 ಕನ್ನಡ ಸಂಘಟನೆಗಳ ನಿಯೋಗವನ್ನು ಬೆಂಗಳೂರಿಗೆ ಕರೆದೊಯ್ಯುವ ನಿರ್ಣಯವನ್ನು, ಇಲ್ಲಿ ಸೋಮವಾರ ನಡೆದ ಕನ್ನಡ ಸಂಘಟನೆಗಳ ಸಭೆಯಲ್ಲಿ ಕೈಗೊಳ್ಳಲಾಯಿತು.

‘ಗಡಿ ವಿವಾದ ಸಂಬಂಧ ಮಹಾಜನ ವರದಿಯೇ ಅಂತಿಮ’ ಹಾಗೂ ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಎಂಬ ನಿರ್ಣಯಗಳನ್ನು ಪಾಲಿಕೆಯಲ್ಲಿ ಅಂಗೀಕರಿಸುವಂತೆ ಆಗ್ರಹಿಸಿ ಮಂಗಳವಾರ ಮೇಯರ್ ಹಾಗೂ ಉಪಮೇಯರ್ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಅಲ್ಲದೇ, ಕನ್ನಡಪರ ಸಂಘಟನೆಗಳ ನಿರ್ಧಾರವನ್ನು ಪ್ರಶ್ನಿಸಿ ಮಾರಾಠಿಯ ಕೆಲ ನಾಯಕರು ವಿರುದ್ಧವಾದ ಹೇಳಿಕೆಗಳನ್ನು ನೀಡಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಯಿತು. ಎಂಇಎಸ್ನ ಉದ್ಧಟತನದ ಹೇಳಿಕೆಗಳಿಗೆ ಮುಖಂಡರು ಖಂಡನೆ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ₹7 ಕೋಟಿ ಅನುದಾನದಲ್ಲಿ ಬೆಳಗಾವಿಯಲ್ಲಿ ನಿರ್ಮಿಸಿದ ಕನ್ನಡ ಭವನವನ್ನು ಸರ್ಕಾರ ತನ್ನ ವಶಕ್ಕೆ ತೆಗೆದುಕೊಳ್ಳಬೇಕು ಎಂಬ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ತೀರ್ಮಾನಿಸಲಾಯಿತು.

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಷ್ಠಾಪಿಸಿದ್ದ ಹಲ್ಮಿಡಿ ಶಾಸನದ ಪ್ರತಿಕೃತಿ ನಾಪತ್ತೆಯಾಗಿದೆ. ಇದನ್ನು ಮರು ಪ್ರತಿಷ್ಠಾಪಿಸಲು ನೀಡಲಾಗಿದ್ದ ಒಂದು ವಾರದ ಗಡುವನ್ನು ಇನ್ನೊಂದು ವಾರ ವಿಸ್ತರಿಸಲು ನಿರ್ಧರಿಸಲಾಯಿತು.

ಅಶೋಕ ಚಂದರಗಿ ಅಧ್ಯಕ್ಷತೆ ವಹಿಸಿದ್ದರು. ಮಹಾದೇವ ತಳವಾರ, ಬಲರಾಮ ಮಾಸೇನಟ್ಟಿ, ವಾಜೀದ್ ಹಿರೇಕೋಡಿ, ಶ್ರೀನಿವಾಸ ತಾಳೂಕರ, ಬಾಳಪ್ಪ ಗುಡಗೇನಟ್ಟಿ, ಸಣ್ತಮ್ಮ ಮೂಕನವರ, ನಾಗೇಶ ಕೊಪ್ಪದ, ಮಲ್ಲಪ್ಪ ಗುಡಗೇನಟ್ಟಿ, ದಯಾನಂದ ಪವಾರ, ಈಶ್ವರಗೌಡ ಪಾಟೀಲ, ಸತೀಶ ನಾಯಕ, ಫರೀದಾ ನದಾಫ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-21-1813351434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.