ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯ ಅಂಗೀಕರಿಸಬೇಕು’ ಎಂದು ಆಗ್ರಹಿಸಿ ಮೇ 26ರಂದು ವಿವಿಧ ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಪಾಲಿಕೆಗೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ.

ಅಂದಿನ ಹೋರಾಟದಲ್ಲಿ ಭಾಗವಹಿಸಲು ಕನ್ನಡ ಹೋರಾಟಗಾರರಾದ ವಾಟಾಳ್ ನಾಗರಾಜ, ಸಾ.ರಾ. ಗೋವಿಂದು, ಕೆ.ಆರ್. ಕುಮಾರ ಹಾಗೂ ಮಂಜುನಾಥ ದೇವ ಅವರು ಬೆಳಗಾವಿಗೆ ಆಗಮಿಸುವರು.

ಬೆಳಿಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪುನರ್ ಸ್ಥಾಪನೆಗೊಂಡ ಹಲ್ಮಿಡಿ ಶಾಸನದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ ಅವರ ನೇತೃತ್ವದಲ್ಲಿ 20 ಕನ್ನಡ ಸಂಘಟನೆಗಳ ಪ್ರಮುಖರು ಮತ್ತು ಕಾರ್ಯಕರ್ತರು ಪಾಲಿಕೆಗೆ ಮುತ್ತಿಗೆ ಹಾಕುವರು.

‘ಹಲ್ಮಿಡಿ ಶಾಸನದ ಪ್ರತಿಕೃತಿಗೆ ಮಲಪ್ರಭಾ, ಘಟಪ್ರಭಾ, ದೂಧಗಂಗಾ, ಹಿರಣ್ಯಕೇಶಿ ಹಾಗೂ ಕೃಷ್ಣಾ ನದಿಗಳ ನೀರಿನ ಅಭಿಷೇಕ, ಕ್ಷೀರಾಭಿಷೇಕ ನಡೆಯಲಿದೆ. ಈ ಕಾರ್ಯಕ್ರಮ ಹಾಗೂ ಪಾಲಿಕೆಗೆ ಮುತ್ತಿಗೆ ಹೋರಾಟದಲ್ಲಿ ಕನ್ನಡಿಗರು ಮತ್ತು ನಾನಾ ಸಂಘ–ಸಂಸ್ಥೆಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-21-1038137874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.