ಬೆಳಗಾವಿ: ಖಾನಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಮನೆಕಳವು ಮತ್ತು ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 10 ಆರೋಪಿಗಳನ್ನು ಬಂಧಿಸಿದ್ದಾರೆ. ಎಲ್ಲರನ್ನೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಡಿವೈಎಸ್ಪಿ ವೀರಯ್ಯ ಹಿರೇಮಠ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಲಾಲಸಾಬ್ ಗವಂಡಿ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.

‘ಕಳೆದ ಕೆಲವು ವರ್ಷಗಳಿಂದ ಖಾನಾಪುರ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಸರಣಿ ಮನೆಕಳವು ಹಾಗೂ ದರೋಡೆ ಪ್ರಕರಣಗಳು ವರದಿಯಾಗಿದ್ದವು. ಇವುಗಳ ಕುರಿತು ಪೊಲೀಸರು ರಹಸ್ಯ ತನಿಖೆ ನಡೆಸುತ್ತಿದ್ದರು. ಇತ್ತೀಚೆಗೆ ದಾಖಲಾಗಿದ್ದ ದರೋಡೆ ಪ್ರಕರಣದ ಸುಳಿವಿನ ಆಧಾರದ ಮೇಲೆ ಪೊಲೀಸರು ವಿಶೇಷ ಮೂರು ತಂಡಗಳನ್ನು ರಚಿಸಿ ಬೆಳಗಾವಿ, ಮಹಾರಾಷ್ಟ್ರ ಹಾಗೂ ಗೋವಾ ಭಾಗಗಳಲ್ಲಿ ವ್ಯಾಪಕ ತನಿಖೆ ನಡೆಸಿದರು’ ಎಂದರು.

‘ತನಿಖೆಯ ವೇಳೆ ದೊರೆತ ಮಹತ್ವದ ಸುಳಿವುಗಳ ಆಧಾರದ ಮೇಲೆ ಹಲವು ಸಂಶಯ ಬಂದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಅನೇಕ ಮನೆಕಳವು ಮತ್ತು ದರೋಡೆ ಪ್ರಕರಣಗಳನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ’ ಎಂದೂ ತಿಳಿಸಿದರು.

ಬಂಧಿತರಲ್ಲಿ ಪಶ್ಚಿಮ ಬಂಗಾಳ ಮೂಲದ ಇಬ್ಬರು ಸೇರಿದಂತೆ ಬೆಳಗಾವಿಯ ವಿವಿಧ ಭಾಗಗಳ ಆರೋಪಿಗಳು ಸೇರಿದ್ದಾರೆ. ಆರೋಪಿಗಳ ವಿರುದ್ಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ವೇಳೆ ಇನ್ನಷ್ಟು ಪ್ರಕರಣಗಳ ಭೇದವಾಗುವ ಸಾಧ್ಯತೆ ಇದೆ ಎಂದರು.

ಕಾರ್ಯಾಚರಣೆಯಲ್ಲಿ ದರೋಡೆಗೆ ಬಳಸಲಾಗಿದ್ದ ಪಿಸ್ತೂಲ್, ಚಿನ್ನದ ಆಭರಣಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಯನ್ನು ಪೊಲೀಸರು ಅತ್ಯಂತ ರಹಸ್ಯ ರೀತಿಯಲ್ಲಿ ಮುಂದುವರಿಸಿದ್ದು, ಇನ್ನಷ್ಟು ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-21-111204764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.