ಮಂಗಳವಾರ, ಆಗಸ್ಟ್ 4, 2020
22 °C

ಕೆಎಲ್‌ಇ ಸ್ವತಂತ್ರ ಪಿಯು ಕಾಲೇಜಿಗೆ ಉತ್ತಮ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಗೋವಾವೇಸ್ ಸಮೀಪದ ಕೆಎಲ್‌ಇ ಸ್ವತಂತ್ರ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಿದೆ.

ವಿಜ್ಞಾನ ವಿಭಾಗದಲ್ಲಿ ಶೇ 99.16ರಷ್ಟು ಫಲಿತಾಂಶ ಬಂದಿದೆ. ಅದರಲ್ಲಿ ಶೇ 34.16ರಷ್ಟು ಮಂದಿ ಅತ್ಯುತ್ತಮ, ಶೇ 60.4ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದ ಒಟ್ಟು ಫಲಿತಾಂಶ ಶೇ 97.73 ಆಗಿದ್ದು, ಅದರಲ್ಲಿ ಶೇ 25.38ರಷ್ಟು ಮಂದಿ ಅತ್ಯುತ್ತಮ, ಶೇ 62.79ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 19 ವಿದ್ಯಾರ್ಥಿಗಳು ಮತ್ತು ವಾಣಿಜ್ಯದಲ್ಲಿ 26 ವಿದ್ಯಾರ್ಥಿಗಳು ನೂರಕ್ಕೆ 100 ಅಂಕಗಳನ್ನು ಪಡೆದಿದ್ದಾರೆ. ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಆಡಳಿತ ಮಂಡಳಿಯವರು, ಬೋಧಕ ಹಾಗೂ ಬೋಧಕೇತರ ವರ್ಗದವರು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.