ಕೌಜಲಗಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಅರಬಾವಿ ವಿಧಾನಸಭಾ ಮತಕ್ಷೇತ್ರದ ಪ್ರಮುಖ ಹೋಬಳಿ ಕೇಂದ್ರವಾದ ಕೌಜಲಗಿಯು ನೂತನ ವಿಧಾನಸಭಾ ಮತಕ್ಷೇತ್ರವಾಗಿ ರಚನೆಯಾಗಬೇಕು ಎಂದು ಯುವ ಮುಖಂಡ ಜಗದೀಶ್ ಶಿವಾಪುರ ಹೇಳಿದರು.

ಕೌಜಲಗಿ ಪಟ್ಟಣದಲ್ಲಿ ಕಳೆದ 40 ವರ್ಷಗಳಿಂದ ಹೋಬಳಿ ಕೇಂದ್ರ ಸ್ಥಾಪನೆಯಾಗಿ 40-50 ಗ್ರಾಮಗಳಿಗೆ ಅನುಕೂಲವಾಗಲು ಉಪ ತಹಸಿಲ್ದಾರ್ ಕಚೇರಿ ಕಾರ್ಯನಿರ್ವಹಿಸುತ್ತಿದೆ. ರೈತರಿಗೆ ಸಕಾಲದಲ್ಲಿ ಸಹಾಯ ಮಾಡಲು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಿಬ್ಬಂದಿ ವರ್ಗ ಕೆಲಸ ಮಾಡುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಇಲ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರವೂ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ, ಸುಮಾರು ₹12 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡವು ನಿರ್ಮಾಣವಾಗಿದ್ದು, ಈ ಭಾಗದ ಜನರಿಗೆ ಆರೋಗ್ಯ ಚಿಕಿತ್ಸೆಗಳನ್ನು ಪಡೆಯಲು ಸಹಾಯಕವಾಗಿದೆ.

1973 ರಿಂದಲೂ ಕೌಜಲಗಿ ಪಟ್ಟಣವು ನೂತನ ತಾಲ್ಲೂಕು ಕೇಂದ್ರವಾಗಬೇಕು ಎಂದು ಒತ್ತಾಯಿಸಿ ಹೋರಾಟವನ್ನು ನಿರಂತರವಾಗಿ ಮುಂದುವರಿಸಿಕೊಂಡು ಬಂದಿದೆ ಎಂದು ಈ ಬಗ್ಗೆ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬೇಡಿಕೆ ಇಲ್ಲಿಯ ಜನಪ್ರತಿನಿಧಿಗಳ, ಅಧಿಕಾರಿಗಳ, ಮುಖಂಡರ, ಕೌಜಲಗಿ ಸುತ್ತಮುತ್ತಲಿನ ಗ್ರಾಮಸ್ಥರ ಒತ್ತಾಯವಾಗಿರುವುದರಿಂದ ವಿಧಾನಸಭಾ ಪುನರವಿಂಗಡಣಾ ಆಯೋಗಗಳು ನೂತನ ವಿಧಾನಸಭಾ ಮತಕ್ಷೇತ್ರಗಳ ರಚನೆಯ ಸಂದರ್ಭದಲ್ಲಿ ಮತಕ್ಷೇತ್ರ ರಚನೆಗೆ ಪ್ರಥಮ ಆದ್ಯತೆ ನೀಡಬೇಕು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-21-1044298685

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.