ಬೆಳಗಾವಿ: ‘ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಎದುರಿಗಿರುವ ಕೃಷಿ ಭವನವನ್ನು ಸರ್ಕಾರದ ಸುಪರ್ದಿಗೆ ಪಡೆಯಬೇಕು’ ಎಂದು ಭಾರತೀಯ ಕೃಷಿಕ ಸಮಾಜ–ಕರ್ನಾಟಕ ಅಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದರು.

‘ಕೃಷಿ ಭವನವನ್ನು 1996ರಲ್ಲಿ ಖಾಸಗಿ ವ್ಯಕ್ತಿಗೆ ಕೃಷಿಗೆ ಸಂಬಂಧಿಸಿದ ಪರಿಕರಗಳನ್ನು ಮಾರಾಟ ಮಾಡಲು ಬಾಡಿಗೆ ನೀಡಲಾಗಿದೆ. ಆದರೆ, ಇದೀಗ ಈ ಕೃಷಿ ಭವನವನ್ನು ಬಾರ್ ಮತ್ತು ರೆಸ್ಟಾರೆಂಟ್ ಆಗಿ ಪರಿವರ್ತಿಸಲಾಗಿದೆ. ಇದು ಅತ್ಯಂತ ಖಂಡನೀಯ’ ಎಂದು ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಕಿಡಿ ಕಾರಿದರು.

‘ಕೃಷಿ ಬೆಳವಣಿಗೆ ಹಾಗೂ ರೈತರ ಹಿತಕ್ಕಾಗಿ ಈ ಭವನ ಕಟ್ಟಲಾಗಿದೆ. ಆದರೆ, ಮದ್ಯ ಮಾರಾಟದ ಮಳಿಗೆ ಮತ್ತು ಲಾಡ್ಜ್ ಮಾಡಿದ್ದು ದುರಂತವೇ ಸರಿ. 2016ರಿಂದ ನಿರಂತರವಾಗಿ ಭಾರತೀಯ ಕೃಷಿಕ ಸಮಾಜದ ವತಿಯಿಂದ ಈ ಬಗ್ಗೆ ಹೋರಾಟ ಮಾಡುತ್ತಿದ್ದೇವೆ. ಈ ನಡುವೆ ಭವನದ ವಿಚಾರವಾಗಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಇದಕ್ಕೆ ಸಮರ್ಪಕ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಒದಗಿಸಬೇಕು. ತಡೆಯಾಜ್ಞೆ ತೆರವುಗೊಳಿಸಬೇಕು’ ಎಂದು ಅವರು ಆಗ್ರಹಿಸಿದರು.

‘ಖಾಸಗಿ ವ್ಯಕ್ತಿಗಳು ಕೃಷಿ ಸಂಬಂಧಿ ಪರಿಕರಗಳ ಮಾರಾಟಕ್ಕೆಂದು ನೀಡಲಾದ ಭವನವನ್ನು ಅನ್ಯಕಾರ್ಯಕ್ಕೆ ಬಳಸಿದವರ ವಿರುದ್ಧ ಹಾಗೂ ಇದನ್ನು ನೀಡಿದವರ ವಿರುದ್ಧ ತನಿಖೆ ನಡೆಸಬೇಕು. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು’ ಎಂದೂ ಒತ್ತಾಯಿಸಿದರು.

ಮುಖಂಡರಾದ ಸಂಜೀವ ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಶೇಖರ, ಶಿವಲೀಲಾ ಮೀಸಾಳೆ, ಈರಪ್ಪ ಪಟ್ಟಿಹಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-21-930828537

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.