ಭಾನುವಾರ, ಆಗಸ್ಟ್ 1, 2021
26 °C

ಬೆಳಗಾವಿ: ಕೃಷ್ಣಾ ನದಿ ನೀರಿನ ಹರಿವು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ:  ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ರಭಸ ತಗ್ಗಿದ್ದು, ಬೆಳಗಾವಿ, ಖಾನಾಪುರದಲ್ಲಿ ಕೆಲಕಾಲ ತುಂತುರು ಮಳೆಯಾಗಿದೆ. ನೆರೆಯ ಮಹಾರಾಷ್ಟ್ರದಿಂದ ಕೃಷ್ಣಾಗೆ ಬರುತ್ತಿರುವ ನೀರಿನ ಹರಿವಿನಲ್ಲಿ ಏರಿಕೆಯಾಗಿದ್ದು, ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕಿನ 7 ಬ್ರಿಡ್ಜ್‌ ಕಮ್‌ ಬ್ಯಾರೇಜ್‌ಗಳು ಈಗಲೂ ಜಲಾವೃತವಾಗಿವೆ.

ದೂಧ್‌ಗಂಗಾ ನದಿಯಿಂದ 17,952 ಕ್ಯುಸೆಕ್ ಹಾಗೂ ರಾಜಾಪುರದಿಂದ 53,500 ಕ್ಯುಸೆಕ್‌ ನೀರು ಸೇರಿ ಒಟ್ಟು 71,452 ಕ್ಯುಸೆಕ್‌ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ನಾ ನದಿಗೆ ಸೇರುತ್ತಿದೆ. ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತವು ಎಚ್ಚರಿಕೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು