ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಕೇಂದ್ರೀಯ ವಿದ್ಯಾಲಯ–2ಕ್ಕೆ ಶೇ 100 ಫಲಿತಾಂಶ

Last Updated 16 ಜುಲೈ 2020, 13:58 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಕ್ಯಾಂಪ್‌ ಪ್ರದೇಶದಲ್ಲಿರುವ ಕೇಂದ್ರೀಯ ವಿದ್ಯಾಲಯ (2) ಸಿಬಿಎಸ್‌ಇ 10 ಹಾಗೂ 12ನೇ ತರಗತಿಗಳ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ಪಡೆದು ಉತ್ತಮ ಸಾಧನೆ ತೋರಿದೆ.

‘ಶಾಲೆಯು ಪ್ರತಿ ವರ್ಷದಂತೆ ಅದ್ವಿತೀಯ ಸಾಧನೆ ಮಾಡಿದೆ. 10ನೇ ತರಗತಿಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ 283 ವಿದ್ಯಾರ್ಥಿಗಳೂ ತೇರ್ಗಡೆ ಆಗಿದ್ದಾರೆ. 14 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 12ನೇ ತರಗತಿಯಲ್ಲಿ ಪರೀಕ್ಷೆ ತೆಗೆದುಕೊಂಡಿದ್ದ ಎಲ್ಲ 77 ವಿದ್ಯಾರ್ಥಿಗಳು ಸಹ ಉತ್ತೀರ್ಣರಾಗಿದ್ದಾರೆ. 12 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿದ್ದಾರೆ’ ಎಂದು ಪ್ರಾಂಶುಪಾಲ ಅರುಣ್‌ಕುಮಾರ್‌ ತಿಳಿಸಿದ್ದಾರೆ.

‘10ನೇ ತರಗತಿಯಲ್ಲಿ ಸಮೃದ್ಧಿ ಸಾಂಗ್ಲಿ ಹಾಗೂ ಅಮೋಘ ಕಳ್ಳಿಮಠ ತಲಾ ಶೇ 93.80ರಷ್ಟು ಅಂಕಗಳನ್ನು ಗಳಿಸಿ ಟಾಪರ್‌ಗಳಾಗಿದ್ದಾರೆ. 12ನೇ ತರಗತಿಯಲ್ಲಿ ವಿಜ್ಞಾನ ವಿಭಾಗದ ಶರಣಕುಮಾರ ಸಾಂಗ್ಲಿ ಶೇ 97.60ರಷ್ಟು ಅಂಕಗಳನ್ನು ಪಡೆದು ರಾಜ್ಯದ ಕೇಂದ್ರೀಯ ವಿದ್ಯಾಲಯಗಳಿಗೆ ಪ್ರಥಮ ಸ್ಥಾನ ಗಳಿಸಿರುವುದು ಈ ಬಾರಿಯ ವಿಶೇಷವಾಗಿದೆ. ವಿಜ್ಞಾನ ವಿಭಾಗದಲ್ಲಿ ಸಂಜೀವಿನಿ ಭೆಂಡೆ ಶೇ 96.40ರಷ್ಟ ಅಂಕ ಗಳಿಸಿ ಶಾಲೆಗೆ 2ನೇ ಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶಾಂಭವಿ ವಜೆ ಶೇ 96.20 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಿಟ್ಟಿಸಿದ್ದಾರೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT