ಬೆಳಗಾವಿ: ‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರು ಮೆಟ್ರಿಕ್ ನಂತರದ ಹಾಸ್ಟೆಲ್ ಜತೆಗೆ, ಒಳಚರಂಡಿ ಸಂಸ್ಕರಣಾ ಘಟಕದ ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗವನ್ನೂ ಅತಿಕ್ರಮಣ ಮಾಡಿದ್ದಾರೆ’ ಎಂದು ಆಪಾದಿಸಿ ರಾಮತೀರ್ಥ ನಗರದ ನಿವಾಸಿಗಳು ಮಂಗಳವಾರ ಪ್ರತಿಭಟನೆ ಮಾಡಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಆವರಣ ಗೋಡೆ ನಿರ್ಮಾಣ ಕೆಲಸ ಸ್ಥಗಿತಗೊಳಿಸಿದ್ದು, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದವರು (ಬುಡಾ) ಎರಡು ಸ್ಥಳಗಳನ್ನು ಬೇರ್ಪಡಿಸಲು ಕಂದಕ ಅಗೆದಿದ್ದಾರೆ.

ಉಪಮೇಯರ್ ಹನುಮಂತ ಕೊಂಗಾಲಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸೇರಿದ್ದ ನಿವಾಸಿಗಳು ಅತಿಕ್ರಮಣದಾರರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ನಗರದ ಮುಖ್ಯ ಸ್ಥಳದಲ್ಲೇ ಇರುವ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಯನ್ನು ಬುಡಾ ಗಮನಕ್ಕೆ ತಾರದೆಯೇ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿಗಳು ತಮ್ಮ ಸುಪರ್ದಿಗೆ ಪಡೆದಿರುವುದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.

‘ತ್ವರಿತವಾಗಿ ಅತಿಕ್ರಮಣ ತೆರವಾಗದಿದ್ದರೆ ಉಗ್ರಹೋರಾಟ ಅನಿವಾರ್ಯ’ ಎಂದು ಎಚ್ಚರಿಕೆ ಕೊಟ್ಟರು.

‘ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೇರೆ ಯೋಜನೆಗೆ ಮೀಸಲಿಟ್ಟ ಭೂಮಿಯಲ್ಲಿ ಅತಿಕ್ರಮಣ ಮಾಡಿರುವುದು ಸರಿಯಲ್ಲ. ಈ ವಿದ್ಯಮಾನ ಗಮನಿಸಿದರೆ, ಬುಡಾ ಹಿರಿಯ ಅಧಿಕಾರಿಗಳು ಸಹ ಇದಕ್ಕೆ ಸಹಕರಿಸುತ್ತಿರುವಂತೆ ತೋರುತ್ತಿದೆ. ಆದರೆ, ಅತಿಕ್ರಮಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಹನುಮಂತ ಕೊಂಗಾಲಿ ಆಗ್ರಹಿಸಿದರು.

‘ಈ ಪ್ರಕರಣದಲ್ಲಿ ತಪ್ಪು ಮಾಡಿರುವ ಸಂಬಂಧಿತ ಅಧಿಕಾರಿಗಳ ವಿರುದ್ಧ ಕೂಡ ಲೋಕಾಯುಕ್ತ ತನಿಖೆ ನಡೆಸಬೇಕು’ ಎಂದೂ ಆಗ್ರಹಿಸಿದರು.

ಪ್ರತಿಭಟನೆ ಕಾವೇರುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಬುಡಾ ಅಧಿಕಾರಿಗಳು, ಹಾಸ್ಟೆಲ್ ಮತ್ತು ಒಳಚರಂಡಿ ಸಂಸ್ಕರಣಾ ಘಟಕದ ಟ್ಯಾಂಕ್ ನಿರ್ಮಾಣಕ್ಕಾಗಿ ಮೀಸಲಿಟ್ಟ ಜಾಗ ಬೇರ್ಪಡಿಸಿದರು.

ಮಾಜಿ ಮೇಯರ್ ಎನ್.ಬಿ.ನಿರ್ವಾಣಿ, ಮುರುಘೇಂದ್ರಗೌಡ ಪಾಟೀಲ, ಮಹಾಂತೇಶ ವಕ್ಕುಂದ, ಸುರೇಶ ಯಾದವ, ಚಂದ್ರಶೇಖರ ಯಾದವ, ಸುರೇಶ ಉರಬಿನಹಟ್ಟಿ ಇದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-21-1437129779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.