ಬೆಳಗಾವಿ: ‘ರಾಜ್ಯದಲ್ಲಿ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿದೆ. ಇದರಿಂದಾಗಿ ಹೂಡಿಕೆದಾರರು ರಾಜ್ಯದಲ್ಲಿ ಹೂಡಿಕೆಗೆ ಮುಂದೆ ಬರುತ್ತಿದ್ದಾರೆ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಇಲ್ಲಿನ ಸಿಟಿ ಲೈನ್ನಲ್ಲಿ ಶುಕ್ರವಾರ ಪೊಲೀಸ್ ವಸತಿ ಗೃಹಗಳನ್ನು ಉದ್ಘಾಟಿಸಿ ಹಾಗೂ ನಗರ ಪೊಲೀಸ್ ಕಮಿಷನರೇಟ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ವಿವಿಧ ಕಟ್ಟಡಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಕಳೆದ ವರ್ಷ ಜಾಗತಿಕ ಹೂಡಿಕೆದಾರರ ಸಭೆ ನಡೆದಿತ್ತು. ರಾಜ್ಯದಲ್ಲಿ ₹10 ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಹೂಡಿಕೆದಾರರು ವಾಗ್ದಾನ ಮಾಡಿದ್ದರು. ಈಗಾಗಲೇ ₹5 ಲಕ್ಷ ಕೋಟಿ ಹೂಡಿಕೆ ಮಾಡಲಾಗಿದೆ’ ಎಂದರು.

‘ಪೊಲೀಸ್ ಇಲಾಖೆಗೆ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಅದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ. ಕಾನೂನು ಮತ್ತು ಸುವ್ಯವಸ್ಥೆ ಉತ್ತಮವಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ನಾವು ಅವಕಾಶ ನೀಡಿಲ್ಲ’ ಎಂದು ಹೇಳಿದರು.

‘ಇಂದು ಉದ್ಘಾಟನೆಯಾದ ಪೊಲೀಸ್ ವಸತಿ ನಿಲಯಗಳು, ಪೊಲೀಸ್ ಠಾಣೆಗಳು ಮತ್ತು ಇತರೆ ಕಾಮಗಾರಿಗೆ ₹67.79 ಕೋಟಿ ವ್ಯಯಿಸಲಾಗಿದೆ. ಶಹಾಪುರ ಪೊಲೀಸ್ ಠಾಣೆ ಆವರಣದಲ್ಲಿ ₹3.82 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಾಣಗೊಂಡಿವೆ’ ಎಂದು ಅವರು ಹೇಳಿದರು.

‘ಈ ಹಿಂದೆ ಪೊಲೀಸ್ ಸಿಬ್ಬಂದಿ ವಸತಿ ಗೃಹ ಮಳೆಗಾಲದಲ್ಲಿ ಸೋರುತ್ತಿದ್ದವು. ಈಗ ರಾಜ್ಯದಾದ್ಯಂತ ಅಪಾರ್ಟ್ಮೆಂಟ್ ಮಾದರಿಯಲ್ಲಿ 2 ಬಿಎಚ್ಕೆ ಮಾದರಿ ಮನೆ ಕಟ್ಟಿಸಿಕೊಡಲಾಗುತ್ತಿದೆ. ಇದಕ್ಕಾಗಿಯೇ ಪೊಲೀಸ್ ಗೃಹ ಮಂಡಳಿ ಸ್ಥಾಪಿಸಿದ್ದೇವೆ’ ಎಂದರು.

‘ಕಳೆದ ವರ್ಷ ಪೊಲೀಸ್ ಗೃಹ ಯೋಜನೆಗೆ ಮುಖ್ಯಮಂತ್ರಿಗಳು ₹2 ಸಾವಿರ ಕೋಟಿ ನೀಡಿದ್ದಾರೆ. ಅದರಲ್ಲಿ ₹1,200 ಕೋಟಿ ಖರ್ಚು ಮಾಡಲಾಗಿದೆ. ಶೇ 40ರಷ್ಟು ಪೊಲೀಸ್ ಸಿಬ್ಬಂದಿಗೆ ತಲಾ ₹38 ಲಕ್ಷ ವೆಚ್ಚದಲ್ಲಿ 2 ಬಿಎಚ್ಕೆ ಮಾದರಿ ಮನೆ ಕಟ್ಟಿಕೊಟ್ಟಿದ್ದೇವೆ. ಈ ಬಜೆಟ್ನಲ್ಲಿ ಮತ್ತೆ ₹350 ಕೋಟಿ ಕೊಟ್ಟಿದ್ದಾರೆ’ ಎಂದರು.

‘ಜನಸ್ನೇಹಿ ಪೊಲೀಸ್ ವ್ಯವಸ್ಥೆ ಒದಗಿಸುವ ವಿಚಾರದಲ್ಲಿ, ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆಯು ದೇಶದಲ್ಲೇ ಮೂರನೇ ಅತ್ಯುತ್ತಮ ಪೊಲೀಸ್ ಠಾಣೆ ಎಂದು ಗುರುತಿಸಿಕೊಂಡಿದೆ. ರಾಜ್ಯದಲ್ಲಿ ಇಂಥ 1 ಸಾವಿರ ಪೊಲೀಸ್ ಠಾಣೆಗಳನ್ನು ನಾವು ರಚಿಸುತ್ತೇವೆ. ಜನಸ್ನೇಹಿ ಎಂದರೆ, ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಪೊಲೀಸರು ಸಂಧಾನ ಮಾಡುತ್ತಾರೆ ಅಂತಲ್ಲ’ ಎಂದೂ ಸ್ಪಷ್ಟಪಡಿಸಿದರು. ಶಾಸಕ ಆಸಿಫ್ ಸೇಠ್ ಅಧ್ಯಕ್ಷತೆ ವಹಿಸಿದ್ದರು. ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಮಹಾಂತೇಶ ಕೌಜಲಗಿ,ವಾಕರಸಾಸಂ ಉಪಾಧ್ಯಕ್ಷ ಸುನೀಲ ಹನುಮಣ್ಣನವರ, ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ ವಿಭಾಗ) ಆರ್.ಹಿತೇಂದ್ರ, ಉತ್ತರ ವಲಯ ಐಜಿಪಿ ಚೇತನ್ಸಿಂಗ್ ರಾಠೋರ, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಾಹುಲ್ ಶಿಂಧೆ, ಎಸ್ಪಿ ಕೆ.ರಾಮರಾಜನ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-21-2032849368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.