ಶನಿವಾರ, ಮೇ 15, 2021
25 °C

ಉಪಚುನಾವಣೆ | ಪ್ರತಿ ಮತಗಟ್ಟೆಯಲ್ಲೂ ವೈದ್ಯಕೀಯ ಸಿಬ್ಬಂದಿ: ಕೆ.ಎಚ್. ಜಗದೀಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಮತದಾನ ಸಮಯದಲ್ಲಿ ಕೋವಿಡ್ ನಿಯಮ ಪಾಲನೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಮತಗಟ್ಟೆಗೆ ಆರೋಗ್ಯ ಇಲಾಖೆಯಿಂದ ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಲಾಗಿದೆ’ ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ್ ತಿಳಿಸಿದರು.

ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರ ವಿಧಾನಸಭಾ ಮತಕ್ಷೇತ್ರದಲ್ಲಿ ಒಟ್ಟು 2,42,618 ಮತದಾರರಿದ್ದಾರೆ. ಅದರಲ್ಲಿ 1,20,502 ಪುರುಷರು, 1,22,105 ಮಹಿಳೆಯರು ಹಾಗೂ 11 ಮಂದಿ ಇತರ ಮತದಾರರಾಗಿದ್ದಾರೆ. ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದಲ್ಲಿ 1,22,705 ಪುರುಷರು ಮತ್ತು 1,20,316 ಮಹಿಳೆಯರು ಹಾಗೂ ಇತರೆ 6 ಸೇರಿ ಒಟ್ಟು 2,43,027 ಮತದಾರಿದ್ದಾರೆ. ಮತಗಟ್ಟೆಗಳನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲೂ ಕೋವಿಡ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದರು.

‘25 ಸೂಕ್ಷ್ಮ ವೀಕ್ಷಕರು, 13 ವಿಡಿಯೊ ವೀಕ್ಷಕರು, ವೆಬ್ ಕಾಸ್ಟ್‌ ಪ್ರಕ್ರಿಯೆಗೆ 119 ಮಂದಿ ಬಳಸಲಾಗುತ್ತಿದೆ. 14 ಮತಗಟ್ಟೆಗಳಿಗೆ ರಿಸರ್ವ್ ಪೊಲೀಸ್ ಹಾಗೂ ಪ್ಯಾರಾ ಮಿಲಿಟರಿ ಪಡೆ ನಿಯೋಜಿಸಲಾಗಿದೆ. ಮತದಾನ ನಡೆಯಲಿರುವ ಸ್ಥಳಗಳಲ್ಲಿ ಸಂಜೆ ಮಳೆ ಬರುವ ಸಾಧ್ಯತೆ ಇದ್ದು, ಮತ ಯಂತ್ರಗಳನ್ನು ರವಾನೆ ಮಾಡಲು ಪಾಲಿಥೀನ್ ಚೀಲ ಬಳಸಲಾಗುವುದು. ಸಿಬ್ಬಂದಿಯ ಕೊರತೆ ಆಗಿಲ್ಲ’ ಎಂದು ತಿಳಿಸಿದರು.

‘ಮತ ಚಲಾವಣೆಗೆ ಸಂಜೆ 7ರವರೆಗೆ ಅವಕಾಶವಿದೆ. 7ರ ಒಳಗೆ ಬಂದ ಮತದಾರರಿಗೆ ಟೋಕನ್ ನೀಡಿ ಹಕ್ಕು ಚಲಾಯಿಸಲು ಅವಕಾಶ ನೀಡಲಾಗುವುದು. ಪ್ರತಿ ಮತದಾರರು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ’ ಎಂದರು.

‘ಮತದಾರರು ತಮ್ಮ ಹಕ್ಕು ಚಲಾಯಿಸುವ ಜೊತೆಗೆ ಕೋವಿಡ್–19 ನಿಯಮ ಪಾಲಿಸಬೇಕು’ ಎಂದು  ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಸಿ.ಬಿ. ಕೊಡ್ಲಿ ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು