ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲುವವರೆಗೆ ಕಾಂಗ್ರೆಸ್‌ನಿಂದ ನಾನೇ ಕಾಯಂ ಅಭ್ಯರ್ಥಿ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.
ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪುತ್ರ ರಾಹುಲ್ ಜಾರಕಿಹೊಳಿ ಅಥವಾ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧಿಸುವ ವಿಚಾರ ಕ್ಷೇತ್ರದ ಜನರಿಗೆ ಬಿಟ್ಟಿದೆ. ಆ ವಿಷಯದಲ್ಲಿ ನಾನು ನಿರ್ಧರಿಸಲಾಗುವುದಿಲ್ಲ. ಇನ್ನೂ ಎರಡು ವರ್ಷವಿದೆ, ನಂತರ ನೋಡೋಣ’ ಎಂದು ಪ್ರತಿಕ್ರಿಯಿಸಿದರು.
‘2023ರ ಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಅಲ್ಲಿ ಗೆದ್ದು ಲೋಕಸಭಾ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದರು.
‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಷಯ ನನಗೆ ಗೊತ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.