ಬೆಳಗಾವಿ: ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಜಯ್ಸಿಂಗ್ ರಜಪೂತ ಮನೆ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಚಿನ್ನ ಮತ್ತು ಆಸ್ತಿ ಪತ್ತೆ ಮಾಡಿದ್ದಾರೆ.

ಬೆಳಗಾವಿಯ ಆಂಜನೇಯ ನಗರದಲ್ಲಿರುವ ಮೂರು ಮನೆಗಳು, ಹುಕ್ಕೇರಿ, ಅಥಣಿ ತಾಲ್ಲೂಕಿನಲ್ಲಿ ಇರುವ ಮನೆ ಸೇರಿ ಒಟ್ಟು ಏಳು ಕಡೆ ಏಕಕಾಲದಲ್ಲಿ ದಾಳಿ ನಡೆದಿದೆ. 498 ಗ್ರಾಂ ಚಿನ್ನಾಭರಣ, ₹6.22 ಲಕ್ಷ ನಗದು, 7 ಪ್ಲಾಟ್ಗಳು, 3 ಮನೆ, 12 ಎಕರೆ ಜಮೀನು, ತಲಾ ಒಂದು ಕಾರು, ದ್ವಿಚಕ್ರ ವಾಹನ ಸೇರಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ಪ್ರಸನ್ನ ದೇಸಾಯಿ, ಡಿಎಸ್ ಪಿ ಬಿ.ಎಸ್. ಪಾಟೀಲ, ಭರತ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-4-559813467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.