ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕೋಡಿ | ಬೆಟ್ಟಿಂಗ್‌: ಹೊಡೆದಾಡಿಕೊಂಡ ಕಾರ್ಯಕರ್ತರು

Published 13 ಮೇ 2024, 16:27 IST
Last Updated 13 ಮೇ 2024, 16:27 IST
ಅಕ್ಷರ ಗಾತ್ರ

ಚಿಕ್ಕೋಡಿ: ಲೋಕಸಭೆಗೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೆಟ್ಟಿಂಗ್ ಅವ್ಯಾಹತವಾಗಿ ನಡೆದಿದೆ. ಪಟ್ಟಣದ ಮದ್ಯದ ಅಂಗಡಿ ಎದುರು ಸೋಮವಾರ ಇಬ್ಬರು ಕಾರ್ಯಕರ್ತರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ. ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಈ ಬಾರಿ ಕಾಂಗ್ರೆಸ್‌ನ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಬಿಜೆಪಿಯ ಅಣ್ಣಾಸಾಹೇಬ ಜೊಲ್ಲೆ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎರಡೂ ಕಡೆಯ ಅಭಿಮಾನಿಗಳು ಸಾವಿರ, ಹತ್ತು ಸಾವಿರ, ಲಕ್ಷ ಹೀಗೆ ಬೆಟ್ಟಿಂಗ್‌ ಕಟ್ಟಿದ್ದಾರೆ ಎಂಬ ಮಾತು ಎಲ್ಲೆಡೆ ಹರಿದಾಡುತ್ತಿವೆ. ಇದೇ ಕಾರಣಕ್ಕೆ ಸೋಮವಾರ ಇಬ್ಬರು ಕಾರ್ಯಕರ್ತರ ಮಧ್ಯೆ ಜಗಳ ನಡೆದಿದೆ. ಈ ಬಗ್ಗೆ ಇಬ್ಬರೂ ದೂರು ಕೊಟ್ಟಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT