ಶನಿವಾರ, ಮೇ 15, 2021
25 °C

ಬೆಳಗಾವಿ: ರಮೇಶ, ಲಕ್ಷ್ಮಿ, ಮಾಮನಿ ಮತದಾನ ಮಾಡುವರೇ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಮೇಶ ಜಾರಕಿಹೊಳಿ–ಸಾಂದರ್ಭಿಕ ಚಿತ್ರ

ಬೆಳಗಾವಿ: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮತದಾನ ಮಾಡುವರೋ‌, ಇಲ್ಲವೋ ಎನ್ನುವ ಕುತೂಹಲ ಮೂಡಿದೆ.

ಸಿ.ಡಿ. ಪ್ರಕರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಅವರು, ಚುನಾವಣೆ ಪ್ರಚಾರದಲ್ಲಿ ಕಾಣಿಸಿಕೊಂಡಿರಲಿಲ್ಲ. ಈ ನಡುವೆ ಅವರಿಗೆ ಕೋವಿಡ್- 19 ದೃಢಪಟ್ಟಿತ್ತು. ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರು, ಬಿಡುಗಡೆಯಾಗಿ ಮನೆಯಲ್ಲಿದ್ದಾರೆ. ಅವರು ಇನ್ನೂ ಗುಣಮುಖವಾಗಿದ್ದಾರೋ ಇಲ್ಲವೋ ಎನ್ನುವ ಮಾಹಿತಿ ಇಲ್ಲ. ಹೀಗಾಗಿ ಅವರು ಹಕ್ಕು ಚಲಾಯಿಸುತ್ತಾರೋ ಇಲ್ಲವೋ ಖಚಿತವಾಗಿಲ್ಲ.

ಗ್ರಾಮೀಣ ಕ್ಷೇತ್ರದ ಶಾಸಕಿ, ಕೆಪಿಸಿಸಿ ವಕ್ತಾರರೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರಿಗೂ‌ ಕೋವಿಡ್ ದೃಢಪಟ್ಟಿದೆ. ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕೂಡ ಸೋಂಕಿತರಾಗಿದ್ದಾರೆ.

Live–ಉಪ‌ಚುನಾವಣೆ: ಬೆಳಗಾವಿಯಲ್ಲಿ ಮತದಾನ ನೀರಸ, ಮಸ್ಕಿಯಲ್ಲಿ ಶೇ 11.23 ಮತದಾನ

ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ಅವರಿಗೂ ಕೋವಿಡ್ ದೃಢಪಟ್ಟಿದೆ. ಮನೆಯಲ್ಲಿ ಪ್ರತ್ಯೇಕವಾಗಿ ಅವರು ಇದ್ದಾರೆ.

ಕೋವಿಡ್ ಸೋಂಕಿತರು ಹಾಗೂ ಶಂಕಿತರಿಗೆ ಕೊನೆಯ ಒಂದು ಗಂಟೆಯಲ್ಲಿ ಅಂದರೆ ಸಂಜೆ 6ರಿಂದ  7ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅವರು ಪಿಪಿಇ ಕಿಟ್ ಧರಿಸಿ ಬರಬೇಕಾಗುತ್ತದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು