ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಕೈತಪ್ಪಿದ ಮತ್ತೊಂದು ಕಚೇರಿ

Last Updated 21 ಸೆಪ್ಟೆಂಬರ್ 2020, 10:48 IST
ಅಕ್ಷರ ಗಾತ್ರ

ಬೆಳಗಾವಿ: ಧಾರವಾಡದಲ್ಲಿರುವ ಕರ್ನಾಟಕ ನೀರಾವರಿ ನಿಗಮದ ವಿಭಾಗೀಯ ಕಚೇರಿಯನ್ನು ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂದಕ್ಕೆ ಪಡೆಯಲಾಗಿದೆ.

ಜಲಸಂಪನ್ಮೂಲ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಚೇರಿ ಇದಾಗಿದೆ. ಖಾಸಗಿ ಕಟ್ಟಡದಲ್ಲಿ ಬಾಡಿಗೆಗೆ ಇರುವ ಈ ಕಚೇರಿಯನ್ನು ಇಲ್ಲಿಗೆ ಸ್ಥಳಾಂತರಿಸುವಂತೆ ಜೂನ್‌ 30ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ಹಿಂಪಡೆದಿರುವ ಕುರಿತು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಅಧೀನ ಕಾರ್ಯದರ್ಶಿ ಜಿ.ಎನ್. ಸುಶೀಲಾ ಸೋಮವಾರ ಅಧಿಸೂಚನೆ ಹೊರಡಿಸಿದ್ದಾರೆ.

ಇದರೊಂದಿಗೆ,ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತವರಾದ ಬೆಳಗಾವಿಗೆ ಬರಬೇಕಿದ್ದ ಮತ್ತೊಂದು ಕಚೇರಿ ಕೈತಪ್ಪಿದಂತಾಗಿದೆ. ಈ ಬಗ್ಗೆ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಖಂಡನೆ ವ್ಯಕ್ತವಾಗಿದೆ.

ಕಚೇರಿ ಸ್ಥಳಾಂತರ ವಿರೋಧಿಸಿ ಧಾರವಾಡದಲ್ಲಿ ರೈತರು ಮತ್ತು ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಸರ್ಕಾರ ಅದಕ್ಕೆ ಮನ್ನಣೆ ನೀಡಿದೆ ಎನ್ನಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT