ಬೆಳಗಾವಿ: ಸಮೀಪದ ಬಿ.ಕೆ.ಕಂಗ್ರಾಳಿ ಗ್ರಾಮದಲ್ಲಿ 43 ವರ್ಷಗಳ ದೀರ್ಘ ನಿರೀಕ್ಷೆಯ ನಂತರ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವ ನೆರವೇರಿತು. ನಾಲ್ಕು ದಶಕಗಳವರೆಗೆ ಕಾದ ಗ್ರಾಮದ ಜನರಲ್ಲಿ ಗ್ರಾಮದೇವಿ ಜಾತ್ರೆ ಎಲ್ಲಿಲ್ಲದ ಸಂಭ್ರಮ ತಂದಿತು.

ಗ್ರಾಮದೆಲ್ಲೆಡೆ ಭಕ್ತಿ, ಸಂಭ್ರಮ ಮತ್ತು ಹಬ್ಬದ ವಾತಾವರಣ ಕಂಗೊಳಿಸಿತು. ಜಾತ್ರೆಯ ಅಂಗವಾಗಿ ಬೆಳಿಗ್ಗೆ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ ಹಾಗೂ ಮಂತ್ರಾಕ್ಷತೆ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ಮುಂದಿನ ದಿನಗಳಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

ಸಾಂಪ್ರದಾಯಿಕ ವಾದ್ಯಗಳ ನಾದ, ಪೂಜಾ ವಿಧಿವಿಧಾನಗಳು ಮತ್ತು ಭಕ್ತರ ಜಯಘೋಷಗಳಿಂದ ಗ್ರಾಮವು ಹಬ್ಬದ ಮೆರುಗು ಪಡೆದುಕೊಂಡಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಮ್ಮ ಕುಟುಂಬ ಸದಸ್ಯರೊಂದಿಗೆ ಭಾಗವಹಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ್ ಹೆಬ್ಬಾಳಕರ ಸಹ ದರ್ಶನ ಪಡೆದರು.

‘ದೀರ್ಘ ಕಾಲದ ಬಳಿಕ ನಡೆಯುತ್ತಿರುವ ಈ ಜಾತ್ರೆ ಗ್ರಾಮಸ್ಥರ ಏಕತೆ ಮತ್ತು ಭಕ್ತಿಯ ಸಂಕೇತವಾಗಿದೆ. ತಾಯಿ ಮಹಾಲಕ್ಷ್ಮಿಯ ಆಶೀರ್ವಾದದಿಂದ ಗ್ರಾಮಕ್ಕೆ ಶಾಂತಿ, ಸಮೃದ್ಧಿ ಬರಲಿ. ಜಾತ್ರಾ ಮಹೋತ್ಸವವು ನಿರ್ವಿಘ್ನವಾಗಿ ನೆರವೇರಲಿ’ ಎಂದು ಸಚಿವೆ ಪ್ರಾರ್ಥಿಸಿದರು.

ಸಚಿವೆ ನಿರ್ದೇಶನದಂತೆ ಗ್ರಾಮದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಮಿತಿಯವರು ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-21-1720984839

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.