ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ ಮಹಾನಗರಪಾಲಿಕೆ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭಕ್ಕೆ ಕ್ಷಣಗಣನೆ

Last Updated 6 ಸೆಪ್ಟೆಂಬರ್ 2021, 2:43 IST
ಅಕ್ಷರ ಗಾತ್ರ

ಬೆಳಗಾವಿ: ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆಯಿಂದಾಗಿ ರಾಜ್ಯದ ಗಮನಸೆಳೆದಿರುವ ಮಹಾನಗರಪಾಲಿಕೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ.

58 ವಾರ್ಡ‌ಗಳಿದ್ದು, 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿಯ 55 ಹಾಗೂ ಕಾಂಗ್ರೆಸ್‌ನ 45 ಅಭ್ಯರ್ಥಿಗಳ ರಾಜಕೀಯ ‌ಭವಿಷ್ಯವನ್ನು ಮತದಾರರು ಬರೆದಿದ್ದು, ಬಹಿರಂಗಗೊಳ್ಳಲು ಕೆಲವೇ ಸಮಯ ಉಳಿದಿದೆ.

ಮತ ಎಣಿಕೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳು, ರಾಜಕೀಯ ಪಕ್ಷದವರು, ಮತ ಎಣಿಕೆ ಏಜೆಂಟರು ಮತ ಎಣಿಕೆ ಕೇಂದ್ರವಾದ ಬಿ.ಕೆ. ಮಾಡೆಲ್ ಶಾಲೆಯತ್ತ ಬರುತ್ತಿದ್ದಾರೆ.

ಇದುವರೆಗೆ ಭಾಷೆ ಆಧಾರದ ಮೇಲೆ ನಡೆಯುತ್ತಿದ್ದ ಚುನಾವಣೆಯು ರಾಜಕೀಯ ಪಕ್ಷಗಳ ರಂಗಪ್ರವೇಶದಿಂದ ರಂಗೇರಿದೆ.

ಮತ ಎಣಿಕೆ ಕೇಂದ್ರದ ಸುತ್ತಲೂ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT