ಬೆಳಗಾವಿ: ಇಲ್ಲಿನ ಕ್ಲಬ್ ರಸ್ತೆಯ ಹ್ಯೂಮ್ ಪಾರ್ಕ್ನಲ್ಲಿ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಮೂರು ದಿನ ಆಯೋಜಿಸಿರುವ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶುಕ್ರವಾರ ಚಾಲನೆ ಸಿಕ್ಕಿತು.

ಇಲ್ಲಿ ಅಲ್ಫಾನ್ಸೊ, ಕೇಸರ್, ಗೋವಾ ಮಂಕೂರ, ಮಲ್ಲಿಕಾ, ಪೈರಿ ಮತ್ತಿತರ ತಳಿಗಳ ಮಾವಿನ ಹಣ್ಣುಗಳನ್ನು ಮಾರಾಟಕ್ಕೆ ಇರಿಸಲಾಗಿತ್ತು. ಜತೆಗೆ, 40 ತಳಿಗಳ ಮಾವುಗಳನ್ನು ಪ್ರದರ್ಶಿಸಲಾಯಿತು. ಬೆಳಗಾವಿ ಮಾತ್ರವಲ್ಲದೆ; ವಿವಿಧ ಕಡೆಗಳಿಂದ ಬಂದಿದ್ದ ಜನರು ತಮ್ಮಿಷ್ಟದ ತಳಿಯ ಮಾವು ಖರೀದಿಸಿ ಸಂಭ್ರಮಿಸಿದರು.

ಮೇಳಕ್ಕೆ ಚಾಲನೆ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ಸಿಂಗ್ ರಾಠೋರ, ‘ರೈತರಿಂದ ಗ್ರಾಹಕರಿಗೆ ನೇರವಾಗಿ ಯೋಗ್ಯ ದರದಲ್ಲಿ ಗುಣಮಟ್ಟದ ಮಾವಿನ ಹಣ್ಣು ಮಾರಾಟ ಮಾಡುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ಜನರು ಉತ್ಸಾಹದಿಂದ ಮೇಳಕ್ಕೆ ಭೇಟಿ ನೀಡಿ, ಮಾವು ಖರೀದಿಸಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ‘ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ರೈತರು ಮೇಳದಲ್ಲಿ ಪಾಲ್ಗೊಂಡಿದ್ದಾರೆ. ಜತೆಗೆ, ಮಹಾರಾಷ್ಟ್ರದ ದೇವಗಢ, ಪಂಢರಪುರದಿಂದಲೂ ರೈತರು ಮಾವು ಮಾರಾಟಕ್ಕೆ ಆಗಮಿಸಿದ್ದಾರೆ. ಸಾರ್ವಜನಿಕರು ಮಾವು ಖರೀದಿಸಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಸಾವಯವ ಕೃಷಿ ಪದ್ಧತಿಯಲ್ಲಿ ಮಾವು ಬೆಳೆದ ರೈತರನ್ನು ತೋಟಗಾರಿಕೆ ಇಲಾಖೆಯಿಂದ ಗುರುತಿಸಿ, ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೆ, ರೈತರು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಅನುಕೂಲವಾಗಲಿದೆ’ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ, ತೋಟಗಾರಿಕೆ ಇಲಾಖೆ ಜಂಟಿನಿರ್ದೇಶಕ ಮಹಾಂತೇಶ ಮುರಗೋಡ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-1104035927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.