ಬೆಳಗಾವಿ: ಇಲ್ಲಿನ ಹುತಾತ್ಮ ಚೌಕ್ನಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಶುಕ್ರವಾರ ಆಯೋಜಿಸಿದ್ದ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಕರ್ನಾಟಕ–ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸಲಾಯಿತು.

ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರು ಈ ವೃತ್ತದಲ್ಲಿ ಸಮಾವೇಶಗೊಂಡು, ಹುತಾತ್ಮ ಯೋಧರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಮೌನಾಚರಣೆ ಮಾಡಿ ಗೌರವ ಸೂಚಿಸಿದರು. ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ಸಹ ನಡೆಸಿದರು.

ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ, ರಂಜೀತ್ ಚವ್ಹಾಣಪಾಟೀಲ, ಮಾಜಿ ಮೇಯರ್ ಸರಿತಾ ಪಾಟೀಲ, ಮಾಜಿ ಉಪಮೇಯರ್ ರೇಣು ಕಿಲ್ಲೇಕರ, ಪ್ರಕಾಶ ಶಿರೋಳಕರ, ರಮಾಕಾಂತ ಕೊಂಡೂಸ್ಕರ, ಮಹಾನಗರ ಪಾಲಿಕೆ ಸದಸ್ಯ ರವಿ ಸಾಳುಂಕೆ ಇತರರಿದ್ದರು. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.

ನಂತರ ಇಲ್ಲಿಂದ ಮಹಾರಾಷ್ಟ್ರದ ಕೊಲ್ಹಾಪುರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ, ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ವ್ಯಾಜ್ಯವನ್ನು ಬೇಗ ಇತ್ಯರ್ಥಪಡಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.