ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವೈದ್ಯಕೀಯ ಸಾಹಿತ್ಯ ರಚನೆಗೆ ಆದ್ಯತೆ ನೀಡಿ: ಡಾ.ನಾ.ಸೋಮೇಶ್ವರ

Published : 24 ಆಗಸ್ಟ್ 2024, 19:26 IST
Last Updated : 24 ಆಗಸ್ಟ್ 2024, 19:26 IST
ಫಾಲೋ ಮಾಡಿ
Comments

ಬೆಳಗಾವಿ: ‘ಕನ್ನಡದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಾಹಿತ್ಯ ರಚನೆ ಕಡಿಮೆಯಿದ್ದು, ಇದನ್ನು ನೀಗಿಸುವಲ್ಲಿ ಯುವ ವೈದ್ಯರು ಪ್ರಮುಖ ಪಾತ್ರ ವಹಿಸಬೇಕು’ ಎಂದು ವೈದ್ಯ ಸಾಹಿತಿ ಡಾ.ನಾ.ಸೋಮೇಶ್ವರ ತಿಳಿಸಿದರು.

ಶನಿವಾರ ಆರಂಭಗೊಂಡ ಎರಡು ದಿನಗಳ ಕನ್ನಡ ವೈದ್ಯ ಬರಹಗಾರರ 5ನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆ, ಕನ್ನಡ ವೈದ್ಯ ಬರಹಗಾರರ ಸಮಿತಿ ಹಾಗೂ ಜವಾಹರಲಾಲ್‌ ನೆಹರೂ ವೈದ್ಯಕೀಯ ಮಹಾವಿದ್ಯಾಲಯದ ಕನ್ನಡ ಬಳಗದ ಸಹಯೋಗದಲ್ಲಿ ಸಮ್ಮೇಳನ ಏರ್ಪಡಿಸಲಾಗಿದೆ.

‘ರಾಜ್ಯದಲ್ಲಿ ನೋಂದಾಯಿತ ವೈದ್ಯರ ಸಂಖ್ಯೆ 1.41 ಲಕ್ಷವಿದ್ದು, ಅವರಲ್ಲಿ ಕನ್ನಡದಲ್ಲಿ ಬರೆಯಬಲ್ಲವರು 120 ಮಂದಿ. ನಿಯಮಿತ ಬರೆಯುವರು 50 ಮಂದಿ. ಹಾಗಾದರೆ ಉಳಿದವರು ಏಕೆ ಬರೆಯುತ್ತಿಲ್ಲ’ ಎಂದು ಅವರು ಪ್ರಶ್ನಿಸಿದರು.

ಸಮ್ಮೇಳನ ಉದ್ಘಾಟಿಸಿದ ಸಾಹಿತಿ ಜಯಂತ ಕಾಯ್ಕಿಣಿ ಮಾತನಾಡಿ, ‘ಕಲೆ ಮತ್ತು ವಿಜ್ಞಾನ ಪೂರಕವಾಗಿ ಕೆಲಸ ಮಾಡುತ್ತವೆ. ಮನುಷ್ಯನ ಯಾತನೆ ಅರ್ಥೈಸಿಕೊಂಡು, ಅದನ್ನು ಕಡಿಮೆಗೊಳಿಸಲು ಪ್ರಯತ್ನಿಸುವುದು ವೈದ್ಯಕೀಯ ರಂಗದ ಕೆಲಸ’ ಎಂದು ಹೇಳಿದರು.

ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಡಾ.ಕೆ.ಆರ್‌.ಶ್ರೀಧರ, ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎಸ್‌.ಶ್ರೀನಿವಾಸ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT