ಮಂಗಳವಾರ, ಮಾರ್ಚ್ 28, 2023
22 °C

ಎಂಇಎಸ್ ಮುಖಂಡನಿಂದ ವಿವಾದಿತ ಫೇಸ್‌ಬುಕ್‌​ ಪೋಸ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮುಖಂಡ ಶುಭಂ ಶೆಳಕೆ, ‘ಸಂಯುಕ್ತ ಮಹಾರಾಷ್ಟ್ರ ಪರಿಕಲ್ಪನೆ’ಯ ನಕ್ಷೆಯನ್ನು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಗಡಿ ವಿವಾದವನ್ನು ಕೆಣಕಿದ್ದಾರೆ.

ಬೆಳಗಾವಿ, ಕಾರವಾರ, ಹಳ್ಯಾಳ, ನಿಪ್ಪಾಣಿ, ಬೀದರ್, ಭಾಲ್ಕಿ ಮಹಾರಾಷ್ಟ್ರಕ್ಕೆ ಸೇರಿದ್ದೆಂಬ ವಿವಾದಿತ ನಕ್ಷೆಯ ಫೋಟೊ ಪೋಸ್ಟ್ ಮಾಡಿದ್ದಾರೆ. ನ.1 ನಮ್ಮ ಪಾಲಿಗೆ ಕರಾಳ ದಿನ ಎಂದು ಬರೆದಿದ್ದಾರೆ.

ಇದನ್ನು ಎಂಇಎಸ್‌ ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡುತ್ತಿದ್ದಾರೆ. ಅವರ ವಾಟ್ಸ್ ಆ್ಯಪ್ ಗ್ರೂಪ್‌ಗಳಲ್ಲೂ ಹರಿದಾಡುತ್ತಿದೆ.

ಇದನ್ನೂ ಓದಿ: ಕರ್ನಾಟಕ ರಾಜ್ಯೋತ್ಸವ ಬಹಿಷ್ಕರಿಸಿ ಎಂಇಎಸ್‌ನಿಂದ ‘ಕರಾಳ ದಿನಾಚರಣೆ’

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು