ಬೆಳಗಾವಿ: ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿರುವ ‘ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ’ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ ವ್ಯಾಪಾರ ಮತ್ತು ಕೈಗಾರಿಕಾ ಸಂಘಟನೆಗಳು ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದವು.

ನಗರದ ಚನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಎಲ್ಲ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ಸಂಘಟನೆಗಳ ಸದಸ್ಯರು ಒಗ್ಗೂಡಿ ಸಭೆ ನಡೆಸಿದರು. ಬಳಿಕ ಅಲ್ಲಿಂದ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು.

ಕನಿಷ್ಠ ವೇತನ ಹೆಚ್ಚಳದಿಂದ ವ್ಯಾಪಾರ, ಕೈಗಾರಿಕೆ ಹಾಗೂ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದ್ದು, ಈ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ಪ್ರಭಾಕರ ನಾಗರಮನೋಳಿ, ‘ಈಗಾಗಲೇ ಉದ್ಯಮಗಳು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿವೆ. ಈಗ ಪುನಃ ಕನಿಷ್ಠ ವೇತನವನ್ನು ಹೆಚ್ಚಿಸಿದರೆ ಬಹಳಷ್ಟು ಉದ್ಯಮಗಳು ಬಾಗಿಲು ಮುಚ್ಚಲಿವೆ. ಇದರಿಂದ ನಿರುದ್ಯೋಗ ಸಮಸ್ಯೆಯೂ ಉಲ್ಬಣವಾಗಲಿದೆ. ಯಾವುದೇ ಕಾರಣಕ್ಕೂ ಈಗ ಆದೇಶಿಸಿರುವ ಕನಿಷ್ಠ ವೇತನ ನಿಯಮವನ್ನು ಜಾರಿಗೆ ತರಬಾರದು. ಹಂತ ಹಂತವಾಗಿ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಒಮ್ಮೆಲೇ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚ್ಜಿಸುವುದು ಉದ್ಯಮಗಳಿಗೆ ದೊಡ್ಡ ಹೊಡೆತ ಬೀಳಲಿದೆ’ ಎಂದರು.

‘ಪಕ್ಕದ ರಾಜ್ಯಗಳಲ್ಲಿ ಕನಿಷ್ಠ ವೇತನ ಅತ್ಯಂತ ಕಡಿಮೆ ಇದೆ. ಆದರೆ, ಕರ್ನಾಟಕದಲ್ಲಿ ಮಾತ್ರ ಏಕಾಏಕಿ ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ಉದ್ಯಮಗಳ ಉಳಿವಿಗೆ ಯಾವುದೇ ಸಹಾಯ ಮಾಡದೆ ಈ ರೀತಿ ವೇತನ ಹೆಚ್ಚಿಸುವುದರಿಂದ ಇಡೀ ಉದ್ಯಮ ವಲಯಕ್ಕೆ ಆಘಾತವಾಗಿದೆ’ ಎಂದು ತಿಳಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಉದ್ಯಮಿಗಳ ಮನವಿಯನ್ನು ಸರ್ಕಾರದ ಗಮನಕ್ಕೆ ತರುವುದಾಗಿಯೂ, ಶೀಘ್ರವೇ ನೂತನವಾಗಿ ನೇಮಕವಾಗಲಿರುವ ಕಾರ್ಮಿಕ ಸಚಿವರು ಹಾಗೂ ಕೈಗಾರಿಕಾ ಸಚಿವರ ಜೊತೆ ಸಭೆಯನ್ನು ಆಯೋಜಿಸಲು ಪ್ರಯತ್ನಿಸುವುದಾಗಿಯೂ ಭರವಸೆ ನೀಡಿದರು.

ಚೇಂಬರ್ ಆಫ್ ಕಾಮರ್ಸ್ ಕಾರ್ಯದರ್ಶಿ ಸತೀಶ್ ಕುಲಕರ್ಣಿ, ವಾಣಿಜ್ಯೋದ್ಯಮ ಸಂಘದ ಎಲ್ಲಾ ಪದಾಧಿಕಾರಿಗಳು, ಸಣ್ಣ ಕೈಗಾರಿಕಾ ಸಂಘದ ಪದಾಧಿಕಾರಿಗಳು, ನಗರದ ವಿವಿಧ ಉದ್ಯಮಗಳ ನೂರಾರು ಪ್ರತಿನಿಧಿಗಳು ಸೇರಿದಂತೆ ಬೇರೆ ಬೇರೆ ಸಂಘ– ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-21-1931519388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.